ಚಿನ್ನದ ಸ್ಮಗ್ಲಿಂಗ್‌‌ ರಾಣಿಗೆ ಸಿಗಲಿಲ್ಲ ಜಾಮೀನು: ಜೈಲೇ ಗತಿ

swapna suresh
Published on

ಕೊಚ್ಚಿ: ಚಿನ್ನ ಅಕ್ರಮ ಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಜಾಮೀನು ಕೋರಿ ಸಲ್ಲಿಸಿದ್ದ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

'ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ಪು ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ, ತನಿಖೆಯ ಅಗತ್ಯವಿದೆ. ಈ ಹಂತದಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಹೇಳಿದೆ.

ತಿರುವನಂತಪುರದ ಯುಎಇ ದೂತಾವಾಸದಲ್ಲಿ ವ್ಯಕ್ತಿಯ ಹೆಸರನ್ನು ಬಳಸಿಕೊಂಡು ರಾಜತಾಂತ್ರಿಕ ಸಾಮಾನುಗಳ ಮೂಲಕ ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪ ಸ್ವಪ್ನಾ ಸುರೇಶ್ ಮೇಲಿದೆ.

ರಾಜತಾಂತ್ರಿಕ ಮಾರ್ಗವನ್ನು ದುರುಪಯೋಗ ಮಾಡಿಕೊಂಡ ಆರೋಪದ ಅಡಿ ಸ್ವಪ್ನಾ ಸುರೇಶ್ ಮತ್ತಿತರರನ್ನು ರಾಷ್ಟ್ರೀಯ ತನಿಖಾ ದಳದವರು ಬಂಧಿಸಿದ್ದರು. ಜಾರಿ ನಿರ್ದೇಶನಾಲಯ ಇವರ ವಿರುದ್ಧ ಪ್ರಕರಣ ದಾಖಲಿಸಿತ್ತು.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸೇರಿದಂತೆ ಹಲವಾರು ರಾಜಕೀಯ ಧುರೀಣರ ಮಾತ್ರವಲ್ಲದೇ ಭಯೋತ್ಪಾದಕರ ಲಿಂಕ್‌ ಕೂಡ ಸ್ವಪ್ನಾಗಿದೆ ಎನ್ನುವುದು ಇದಾಗಲೇ ತನಿಖೆಯಿಂದ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿರುವ ಸ್ವಪ್ನಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಳು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net