

ಜಗದಲ್‌ಪುರ (ಛತ್ತೀಸ್ಗಢ): ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರಾಯ್‌ಪುರ ಜಗದಲ್‌ಪುರದ ಹೆದ್ದಾರಿ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 30ರ ಸೇತುವೆ ಬಳಿ ಈ ಘಟನೆ ನಡೆದಿದೆ. ಇಂದು ನಸುಕಿನ ವೇಳೆ ರಾಯ್‌ಪುರ ಕಡೆಯಿಂದ ಬರುತ್ತಿದ್ದ ಟಾಟಾ ನೆಕ್ಸಾನ್ ಕಾರಿಗೆ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಬಸ್ನ ಚಾಲಕ ಮತ್ತು ಕಂಡಕ್ಟರ್ ಇಬ್ಬರೂ ಪರಾರಿಯಾಗಿದ್ದಾರೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಐವರು ಯುವಕ ಪೈಕಿ ನಾಲ್ವರು ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿರುವ ಓರ್ವನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತದೇಹಗಳನ್ನು ಹೊರತೆಗೆಯಲು ಗ್ಯಾಸ್ ಕಟ್ಟರ್‌ಗಳನ್ನು ಬಳಸಬೇಕಾಗಿ ಬಂತು. ಮೃತಪಟ್ಟ ಯುವಕರು ಜಗದಲ್‌ಪುರದ ವಿವಿಧ ಸ್ಥಳಗಳಿಂದ ಬಂದಿದ್ದರೆ, ಒಬ್ಬ ಯುವಕ ಸುಕ್ಮಾ ಜಿಲ್ಲೆಯವನು ಎಂದು ಹೇಳಲಾಗುತ್ತಿದೆ. (ಏಜೆನ್ಸೀಸ್)