ಉಗ್ರರ ದಾಳಿಗೆ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮ: ಮೂವರಿಗೆ ಗಾಯ

sene
Published on

ಶ್ರೀನಗರ: ಇಲ್ಲಿನ ನೌಗಾಮ್ ಪ್ರದೇಶದಲ್ಲಿ ಉಗ್ರರು ಇಂದು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದರಿಂದ ಇಬ್ಬರು ಸಿಆರ್​ಪಿಎಫ್​ ಯೋಧರು ಬಲಿಯಾಗಿದ್ದಾರೆ.

ನೌಗಾಮ್ ಪ್ರದೇಶದ ಕಂಡಿಜಾಲ್ ಸೇತುವೆ ಬಳಿ ಇಂದು ಮಧ್ಯಾಹ್ನ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಅವರ ನಡುವಿನ ಹೋರಾಟದಲ್ಲಿ ಇಬ್ಬರು ಹುತಾತ್ಮರಾಗಿರುವುದಾಗಿ ಸೇನೆ ತಿಳಿಸಿದೆ. ಗುಂಡಿನ ದಾಳಿಯಲ್ಲಿ ಈ ಇಬ್ಬರಿಗೂ ಗಂಭೀರ ಗಾಯಗಳಾಗಿದ್ದವು. ಆದರೆ ನಂತರ ಅವರು ಹುತಾತ್ಮರಾಗಿದ್ದಾರೆ.

ಈ ಘರ್ಷಣೆಯಲ್ಲಿ ಮೂವರು ಭಾರತೀಯ ಯೋಧರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಇಲ್ಲಿನ ಸೇನೆಯ 92 ಬೇಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮುಂದಿನ ಮಾಹಿತಿ ತಿಳಿದುಬರಬೇಕಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

110ನೇ ಬೆಟ್ಯಾಲಿಯನ್​ ಸಿಬ್ಬಂದಿ ಸಲಕರಣೆಗಳನ್ನು ಒಯ್ಯುತ್ತಿದ್ದ ಸಂದರ್ಭದಲ್ಲಿ ಭಯೋತ್ಪಾದಕರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಐವರು ಯೋಧರಿಗೆ ಗಂಭೀರ ಗಾಯಗಳಾಗಿದ್ದವು. ಅ ಪೈಕಿ ಇಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಏಕಾಏಕಿ ನಡೆದ ಈ ಗುಂಡಿನ ದಾಳಿಯ ನಂತರ ಜಮ್ಮು-ಕಾಶ್ಮೀರದ ನೌಗಾಮ್​ ಪ್ರದೇಶವನ್ನು ಸಂಪೂರ್ಣವಾಗಿ ಬಂದ್​ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net