ರಕ್ಷಣಾ ಸಂಶೋಧನೆ, ಅಭಿವೃದ್ಧಿ ಸಂಸ್ಥೆಯಲ್ಲಿ ಅಪ್ರೆಂಟಿಸ್‌ಷಿಪ್‌ಗೆ ಅರ್ಜಿ ಆಹ್ವಾನ

drdo
Published on

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್​ಡಿಒ) ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರಿನ ಸೆಂಟರ್ ಫಾರ್ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಆಂಡ್ ರೋಬೋಟಿಕ್ಸ್ (ಸಿಎಐಆರ್) ಘಟಕದಲ್ಲಿ ಪದವಿ ಹಾಗೂ ಡಿಪ್ಲೊಮಾ ಅಪ್ರೆಂಟೀಸ್​ಗಳಿಗೆ ತರಬೇತಿ ನೀಡಲಾಗುತ್ತಿದ್ದು, ಅರ್ಹ, ಪ್ರತಿಭಾವಂತ, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ನೇಮಕ ಮಾಡಿಕೊಳ್ಳಲಾಗುತ್ತಿರುವ ಅಪ್ರೆಂಟೀಸ್ ಸ್ಥಾನಗಳಲ್ಲಿ ಸರ್ಕಾರದ ನಿಯಮದನ್ವಯ ಅಭ್ಯರ್ಥಿಗಳಿಗೆ ಮೀಸಲಾತಿ ನಿಗದಿಯಾಗಿರುತ್ತದೆ. ಈ ತರಬೇತಿ ಅವಧಿಯು 12 ತಿಂಗಳು ಇರಲಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವೈದ್ಯಕೀಯವಾಗಿ ಫಿಟ್ ಆಗಿರುವ ಪ್ರಮಾಣಪತ್ರ ಸಲ್ಲಿಸಬೇಕು.

 ಒಟ್ಟು ಸ್ಥಾನಗಳು: 34

ಸ್ಥಾನಗಳ ವಿವರ

* ಗ್ರಾಜುಯೇಟ್ ಅಪ್ರೆಂಟೀಸ್ - 33

- ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಇಂಜಿನಿಯರಿಂಗ್/ ಇನ್​ಫಮೇಷನ್ ಸೈನ್ಸ್ ಆಂಡ್ ಟೆಕ್ನಾಲಜಿ ಇಂಜಿನಿಯರಿಂಗ್ - 24

- ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ ಆಂಡ್ ಇನ್​ಸ್ಟ್ರುಮೆಂಟೇಷನ್/ ಟೆಲಿಕಾಂ ಇಂಜಿನಿಯರಿಂಗ್ - 8

- ಮೆಕಾನಿಕಲ್ - 1

* ಟೆಕ್ನೀಷಿಯನ್ (ಡಿಪ್ಲೊಮಾ) ಅಪ್ರೆಂಟೀಸ್ - 1

- ಕಂಪ್ಯೂಟರ್ ಸೈನ್ಸ್/ ಇಂಜಿನಿಯರಿಂಗ್/ಕಂಪ್ಯೂಟರ್ ನೆಟ್​ವರ್ಕಿಂಗ್ - 1

ಏನು ಓದಿರಬೇಕು?: ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಇಂಜಿನಿಯರಿಂಗ್/ ಇನ್​ಫಮೇಷನ್ ಸೈನ್ಸ್ ಆಂಡ್ ಟೆಕ್ನಾಲಜಿ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ ಆಂಡ್ ಇನ್​ಸ್ಟ್ರುಮೆಂಟೇಷನ್/ ಟೆಲಿಕಾಂ ಇಂಜಿನಿಯರಿಂಗ್, ಮೆಕಾನಿಕಲ್ ಇಂಜಿನಿಯರಿಂಗ್​ನಲ್ಲಿ ಪದವಿ ಹಾಗೂ ಡಿಪ್ಲೊಮಾ ಪದವಿ ಪಡೆದಿರಬೇಕು. ಸ್ನಾತಕೋತ್ತರ ಪದವಿ ಪಡೆದಿರುವ ಹಾಗೂ ಒಂದು ವರ್ಷಕ್ಕಿಂತ ಹೆಚ್ಚು ವೃತ್ತಿ ಅನುಭವ ಇರುವ ಅಭ್ಯರ್ಥಿಗಳಿಗೆ ಅವಕಾಶ ಇಲ್ಲ ಎಂದು ಸೂಚಿಸಲಾಗಿದೆ.

ವಯೋಮಿತಿ: 2021ರ ನವೆಂಬರ್​ಗೆ ಅನುಗುಣವಾಗಿ ಕನಿಷ್ಠ 18 ವರ್ಷ, ಗರಿಷ್ಠ 27 ವರ್ಷ, ಮೀಸಲಾತಿ ಆಭ್ಯರ್ಥಿಗಳಿಗೆ ಸರ್ಕಾರದ ನಿಯಮದನ್ವಯ ವಯೋ ಸಡಿಲಿಕೆ ಇದೆ.

ಸ್ಟೈಪೆಂಡ್: ಗ್ರಾಜುಯೇಟ್ ಅಪ್ರೆಂಟೀಸ್​ಗೆ ಮಾಸಿಕ 9,000 ರೂ. ಹಾಗೂ ಡಿಪ್ಲೊಮಾ ಅಪ್ರೆಂಟೀಸ್​ಗೆ ಮಾಸಿಕ 8,000 ರೂ. ಗೌರವಧನ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಶೈಕ್ಷಣಿಕ ಅಂಕ, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.

ಸೂಚನೆ: ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದಕ್ಕೂ ಮುನ್ನ ಎಂಎಚ್​ಆರ್​ಡಿಎನ್​ಎಟಿಎಸ್ ವೆಬ್​ಸೈಟ್​ನಲ್ಲಿ ಹೆಸರು ನೋಂದಣಿ ಮಾಡಿಕೊಂಡಿರಬೇಕು.

ಅರ್ಜಿ ಸಲ್ಲಿಸಲು ಕೊನೇ ದಿನ: 10.12.2021

ಅಧಿಸೂಚನೆಗೆ:https://bit.ly/3nI4qOl

ಮಾಹಿತಿಗೆ:http://www.drdo.gov.in

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net