

ಲಖನೌ (ಉತ್ತರಪ್ರದೇಶ): ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಆಸ್ಪತ್ರೆ ದೌಡಾಯಿಸಿದ್ದಾರೆ.
ಇಲ್ಲಿಯ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಎಸ್‌ಜಿಪಿಜಿಐ) ಕಳೆದ 51 ದಿನಗಳಿಂದ ಕಲ್ಯಾಣ್ಸಿಂಗ್ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಕಲ್ಯಾಣ್ ಸಿಂಗ್ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
ಕಲ್ಯಾಣ್ ಸಿಂಗ್ ಅವರು ಹಲವು ತಿಂಗಳುಗಳಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದಾರೆ. 89 ವರ್ಷದ ಕಲ್ಯಾಣ್ ಸಿಂಗ್ ಅವರು ಬಿಜೆಪಿಯ ಹಿರಿಯ ನಾಯಕರಾಗಿದ್ದು, ರಾಜಸ್ಥಾನದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಸೋಂಕು ತಗುಲಿದ ಕಾರಣ ಮತ್ತು ಅವರ ಶಕ್ತಿ ಕಡಿಮೆಯಾಗಿದ್ದರಿಂದ ತಿಂಗಳ ಆರಂಭದಲ್ಲಿ ಐಸಿಯುಗೆ ದಾಖಲಿಸಲಾಗಿತ್ತು. ಈಗಲೇ ಏನನ್ನೂ ಹೇಳಲಾಗದು ಎಂದು ವೈದ್ಯರು ತಿಳಿಸಿದ್ದಾರೆ.