ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ: ಇಬ್ಬರು ಕನ್ನಡದ ಸಾಹಿತಿಗಳಿಗೆ ಪ್ರಶಸ್ತಿಯ ಗರಿ

sahitya
Published on

ಬೆಂಗಳೂರು: ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪ್ರಕಟವಾಗಿದೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದು, ಶಿರಸಿ-ಸಿದ್ದಾಪುರದ ತಮ್ಮಣ್ಣ ಬೀಗಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಈ ಪ್ರಶಸ್ತಿಯು 50 ಸಾವಿರ ರೂಪಾಯಿ ಹಾಗೂ ಸನ್ಮಾನವನ್ನು ಒಳಗೊಂಡಿರುತ್ತದೆ.

ದಾದಾಪೀರ್ ಅವರ 'ನೀಲಕುರಿಂಜಿ ' ಕಥಾ ಸಂಕಲನಕ್ಕೆ ಯುವ ಸಾಹಿತ್ಯ ಪ್ರಶಸ್ತಿ ಬಂದಿದ್ದರೆ ತಮ್ಮಣ್ಣ ಬೀಗಾರ ಅವರ ' ಬಾವಲಿ ಗುಹೆ ' ಮಕ್ಕಳ ಕಾದಂಬರಿಗೆ ಬಾಲ ಸಾಹಿತ್ಯ ಪ್ರಶಸ್ತಿ ಸಂದಿದೆ. 'ನೀಲಕುರಿಂಜಿ 'ಯನ್ನು ರಾಯಚೂರು ಜಿಲ್ಹೆಯ ಕೆ.ಗುಡುದಿನ್ನಿಯ ವೈಷ್ಣವಿ ಪ್ರಕಾಶನ ಹಾಗೂ 'ಬಾವಲಿ ಗುಹೆ 'ಯನ್ನು ಬೆಂಗಳೂರಿನ ಅಭಿನವ ಪ್ರಕಾಶನವು ಪ್ರಕಟಿಸಿವೆ.

ಯುವ ಸಾಹಿತ್ಯ ಪ್ರಶಸ್ತಿಯ ಜ್ಯೂರಿಗಳಾಗಿ ಉಷಾ, ನಗರಗೆರೆ ರಮೇಶ್ ಹಾಗೂ ಎನ್.ಎಸ್. ಗುಂಡೂರ ಕಾರ್ಯ ನಿರ್ವಹಿಸಿದ್ದರೆ ಬಾಲ ಸಾಹಿತ್ಯ ಪ್ರಶಸ್ತಿಗೆ ಶಿವಲಿಂಗಪ್ಪ ಹಂದಿಹಾಳು , ಲೋಹಿತ್ ನಾಯ್ಕರ್ ಹಾಗೂ ಎಂ.ಎಚ್ ನಾಗರಾಜ್ ಅವರು ಜ್ಯೂರಿಗಳಾಗಿದ್ದರು. ಪುಸ್ತಕ ಆಯ್ಕೆ ಪ್ರಕ್ರಿಯೆಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿಯ ಸಂಯೋಜಕರಾದ ಡಾ ಸರಜೂ ಕಾಟ್ಕರ್ ಅವರ ಉಸ್ತುವಾರಿಯಲ್ಲಿ ನಡೆಯಿತು.

ಪ್ರಶಸ್ತಿಗಳನ್ನು ಡಿಸೆಂಬರ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net