ಬಿಜೆಪಿ ನಾಯಕಿ ಖುಷ್ಬೂ ಪ್ರಯಾಣಿಸುತ್ತಿದ್ದ ಕಾರು ಟ್ಯಾಂಕರ್​ಗೆ ಢಿಕ್ಕಿ: ಕಾರು ನಜ್ಜುಗುಜ್ಜು!

khushboo
Published on

ಚೆನ್ನೈ : ಬಿಜೆಪಿ ನಾಯಕಿ ಖುಷ್ಬೂ ಸುಂದರ್, ನಟಿ ಖುಷ್ಬೂ ಸುಂದರ್ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು ಅಪಘಾತಕ್ಕೀಡಾಗಿದೆ.

ತಮಿಳುನಾಡಿನ ಮೆಲ್ಮರುವಾತ್ತೂರ್​ನಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಖುಷ್ಬೂ ಅವರಿಗೆ ಯಾವುದೇ ಹಾನಿಯಾಗಿಲ್ಲ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಖುಷ್ಬೂ ಅವರಿದ್ದ ಕಾರಿಗೆ ವೇಗವಾಗಿ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ನಮ್ಮ ಕಾರು ಸರಿಯಾದ ಮಾರ್ಗದಲ್ಲೇ ಚಲಿಸುತ್ತಿತ್ತು, ಕಂಟೈನರ್ ಎಲ್ಲಿಂದಲೋ ಬಂದು ನನ್ನ ಕಾರಿಗೆ ಗುದ್ದಿದೆ ಎಂದು ಖುಷ್ಟೂ ತಮ್ಮ ಟ್ವಿಟರ್​ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ಕಾರು ಅಪಘಾತದ ಫೋಟೋಗಳನ್ನೂ ಅವರು ಶೇರ್​ ಮಾಡಿಕೊಂಡಿದ್ದಾರೆ.

ನಿಮ್ಮೆಲ್ಲರ ಆಶೀರ್ವಾದ ಹಾಗೂ ದೇವರ ಕೃಪೆಯಿಂದ ನನಗೆ ಏನೂ ಆಗಿಲ್ಲ, ಪ್ರಾಣಾಪಾಯದಿಂದ ಪಾರಾಗಿದ್ದೇನೆ. ಮುರುಗನ್​ ದೇವರ ಮೇಲೆ ಪತಿಗೆ ಅಪಾರ ಭಕ್ತಿ. ಅವನೇ ನಮ್ಮನ್ನು ಕಾಪಾಡಿದ್ದಾನೆ. ಎಂದು ಅವರು ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net