ಪ್ರಿಯ ಸೋನಿಯಾಜಿ... ಕೆಲಸ ಮಾಡುವವರಿಗೆ ಬೆಲೆಯೇ ಇಲ್ಲದೆಡೆ ನಾನಿರಲಾರೆ- 'ಕೈ'ಗೆ ಖುಷ್ಬೂ ಬೈಬೈ!

khushboo
Published on

ಚೆನ್ನೈ: ಕಾಂಗ್ರೆಸ್​ ಪಕ್ಷದ ರಾಷ್ಟ್ರೀಯ ವಕ್ತಾರೆ ಹಾಗೂ ಬಹುಭಾಷಾ ನಟಿ ಖಷ್ಟೂ ಸುಂದರ್​ ಅವರು ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮ ಪತ್ರ ರವಾನಿಸಿರುವ ಖುಷ್ಬು, ತನಗೆ ಕಾಂಗ್ರೆಸ್​ನಲ್ಲಿ ಇರಲು ಇಷ್ಟವಿಲ್ಲ ಎಂದು ಬರೆದಿದ್ದಾರೆ. 2014ರ ಚುನಾವಣೆಯಲ್ಲಿ ಸೋತರೂ ಕಾಂಗ್ರೆಸ್​ನ ಸಿದ್ಧಾಂತದಿಂದಾಗಿ ತಾನು ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಹೆಸರು, ಕೀರ್ತಿ, ಹಣದ ಆಸೆ ಇರದ ಕಾರಣ ಅಲ್ಲಿಯೇ ಮುಂದುವರೆಯಲು ಇಚ್ಛಿಸಿದ್ದೆ. ಆದರೆ ಉನ್ನತ ಸ್ಥಾನದಲ್ಲಿ ಇರುವ ಕೆಲವರಿಗೆ ರಾಜಕೀಯದ ಮೂಲವೇ ಗೊತ್ತಿಲ್ಲ. ಉನ್ನತ ಸ್ಥಾನದಲ್ಲಿ ಇದ್ದವರು ಆಳುತ್ತಿರುವುದನ್ನು ನಾನು ನೋಡಲಾರೆ. ಆದ್ದರಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಖಷ್ಟೂ ಹೇಳಿದ್ದಾರೆ.

ಜತೆಗೆ ಇಲ್ಲಿಯವರೆಗೆ ಪಕ್ಷದಲ್ಲಿ ಸೇವೆ ಸಲ್ಲಿಸಲು ಅವಕಾಶ ಕೊಟ್ಟಿರುವುದಕ್ಕೆ ಸೋನಿಯಾ ಮತ್ತು ರಾಹುಲ್​ ಗಾಂಧಿಯವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಅದೇ ಇನ್ನೊಂದೆಡೆ, ಇವರು ಬಿಜೆಪಿಯನ್ನು ಸೇರುತ್ತಿದ್ದಾರೆ ಎಂಬ ಸುದ್ದಿಯಾಗಿದೆ. ಒಂದು ಮೂಲಗಳ ಪ್ರಕಾರ ಖಷ್ಟೂ ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಇತರ ಹಿರಿಯ ನಾಯಕರನ್ನು ಭೇಟಿ ಮಾಡಿ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

2014ರ ಸೆಪ್ಟೆಂಬರ್​ನಲ್ಲಿ ಡಿಎಂಕೆ ಪಕ್ಷ ತೊರೆದಿದ್ದ ಖುಷ್ಬೂ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆದರೆ ಕಳೆದೊಂದು ತಿಂಗಳಿನಿಂದ ಖುಷ್ಬೂ ಅವರು ಬಿಜೆಪಿಗೆ ಸೇರ್ಪಡೆಯಾಗುವ ಕುರಿತು ಊಹಾಪೋಹ ಎದ್ದಿದ್ದವು. ಕಳೆದ ವಾರ ಬಿಜೆಪಿ ಸೇರ್ಪಡೆ ವಿಚಾರವನ್ನು ತಳ್ಳಿ ಹಾಕಿದ್ದಾರೆ.

ಬಿಜೆಪಿಗೆ ಸೇರ್ಪಡೆಯಾಗುವ ವಿಚಾರದ ಬಗ್ಗೆ ಮಾಹಿತಿ ನೀಡಿದ್ದ ಅವರು, ಟ್ವಿಟ್ಟರ್​ನಲ್ಲಿ ಯಾರೋ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದಿದ್ದರು. ಆದರೆ ಇದೀಗ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಎಲ್. ಮುರುಗನ್ ಅವರ ಉಪಸ್ಥಿತಿಯಲ್ಲಿ ಖುಷ್ಬು ಇಂದು ಬಿಜೆಪಿ ಹೈಕಮಾಂಡ್ ಭೇಟಿಯಾಗಲಿದ್ದು, ಅಧಿಕೃತ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net