

ಬೆಂಗಳೂರು: ವಿಧಾನಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ ಪ್ರಭಾವಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಿಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ ಹೇಳಿದಿಷ್ಟು- ವಿಧಾನಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಆತ್ಮಹತ್ಯೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದನ್ನು ನಂಬೋದಕ್ಕೇ ಆಗ್ತಾ ಇಲ್ಲ. ಡೆತ್ನೋಟಿನಲ್ಲಿ ಏನು ಬರೆದಿಟ್ಟಿದ್ದಾರೋ ಗೊತ್ತಿಲ್ಲ. ಅವರು ಬಹಳ ಸೂಕ್ಷ್ಮ ವ್ಯಕ್ತಿ. ಯಾವ ಕಾರಣಕ್ಕೆ ಇಷ್ಟು ಧೈರ್ಯ ಕಳೆದುಕೊಂಡರೋ ಅರ್ಥವಾಗುತ್ತಿಲ್ಲ.
ವೈಯಕ್ತಿಕ ವಿಚಾರವೋ ಅಥವಾ ರಾಜಕಾರಣವೋ ಒಟ್ಟಿನಲ್ಲಿ ಆಗಬಾರದ್ದು ಆಗಿ ಹೋಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ಬಂಧುಗಳಿಗೆ ದುಃಖವನ್ನು ಭರಿಸುವ ಶಕ್ತಿ ಸಿಗಲಿ. ಕುಮಾರಸ್ವಾಮಿ ಸಹಜವಾಗಿ ದುಃಖದಲ್ಲಿದ್ದಾರೆ. ಅವರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಅವರ ಪಕ್ಷದವರಿಗೂ ನೋವಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಬಲ್ಲೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್ಗಾಗಿ ನಮ್ಮ ಫೇಸ್ಬುಕ್ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..