ಪ್ರೇಯಸಿಯ ಮನೆಗೆ ಹೋಗಿ ಕೊಲೆಯಾದ ಬಾಲಕ: ಮರ್ಮಾಂಗ ಕತ್ತರಿಸಿ ಹತ್ಯೆ ಮಾಡಿದರು!

murder
Published on

ಲಖನೌ: ಪಕ್ಕದ ಗ್ರಾಮದ ಯುವತಿಯನ್ನು ಪ್ರೀತಿಸಿದ ತಪ್ಪಿಗೆ ಯುವಕನೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ಬಿಹಾರದ ಮುಜಾಫರ್​ನಲ್ಲಿ ನಡೆದಿದೆ.

ಸೌರಭ್ ಕುಮಾರ್ ಎಂಬ ಸುಮಾರು 16 ವರ್ಷದ ಬಾಲಕ ಕೊಲೆಯಾದನು. ಪಕ್ಕದ ಸೊರ್ಬಾರಾ ಹಳ್ಳಿಯ ಹುಡುಗಿಯನ್ನು ಈತ ಪ್ರೀತಿಸುತ್ತಿದ್ದ. ಆಕೆ ಕೂಡ ಇವನನ್ನು ಪ್ರೀತಿಸುತ್ತಿದ್ದಳು. ಹುಡುಗಿಯ ಮನೆಯಲ್ಲಿ ಯಾರೂ ಇಲ್ಲ ಎನ್ನುವ ಕಾರಣಕ್ಕೆ ಆಕೆಯ ಮನೆಗೆ ಸೌರಭ್ ಹೋಗಿದ್ದಾನೆ. ಆದರೆ ಇದೇ ವೇಳೆ ಇಬ್ಬರೂ ಒಟ್ಟಿಗೇ ಸಿಕ್ಕಿಬಿದ್ದಿದ್ದಾರೆ.

ಇಬ್ಬರನ್ನೂ ಒಟ್ಟಿಗೇ ನೋಡಿದ ಬಾಲಕಿಯ ಮನೆಯವರು ಹುಡುಗನ ಮರ್ಮಾಂಗ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಆತನನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಪ್ರಯೋಜನವಾಗಲಿಲ್ಲ. ಸಿಟ್ಟಿಗೆದ್ದ ಬಾಲಕನ ಮನೆಯವರು ಹುಡುಗಿಯ ಮನೆಯ ಎದುರೇ ಸೌರಭ್ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಕೊಲೆ ಮಾಡಿರುವ ಆರೋಪ ಹೊತ್ತ ಕೆಲವರನ್ನು ವಶಕ್ಕೆ ಪಡೆಯಲಾಗಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net