

ಮುಂಬೈ: ಪಂಚರಾಜ್ಯ ಚುನಾವಣೆಗೆ ದಿನಾಂಕ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಮುಖಂಡರ ವಾಗ್ದಾಳಿಗೆ ಎಲ್ಲೆಯೇ ಇಲ್ಲವಾಗಿದೆ. ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಮಾತನಾಡುತ್ತಾ ಪ್ರಧಾನಿಯ ವಿರುದ್ಧ ವಿವಾದಿತ ಹೇಳಿಕೆಗಳನ್ನು ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾನು ಹಲ್ಲೆ ಮಾಡಬಲ್ಲೆ, ಅವರನ್ನು ಕೊಲ್ಲಬಲ್ಲೆ, ಅವರನ್ನು ನಿಂದಿಸಬಲ್ಲೆ ಎಂದು ಹೇಳಿದ್ದಾರೆ! ಜಿಲ್ಲಾ ಪರಿಷತ್ ಮತ್ತು ಪಂಚಾಯಿತಿ ಸಮಿತಿ ಚುನಾವಣೆಗೂ ಮುನ್ನ ನಡೆದ ರ್ಯಾಲಿವೊಂದರಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಈ ಮಾತುಗಳನ್ನು ಹೇಳುತ್ತಿದ್ದರು.
ನಾನು ಪ್ರಧಾನಿಗೆ ಏನು ಬೇಕಾದರೂ ಮಾಡಬಲ್ಲೆ. ಆದ್ದರಿಂದಲೇ ಅವರುನನ್ನ ವಿರುದ್ಧ ಪ್ರಚಾರಕ್ಕಾಗಿ ಇಲ್ಲಿಗೆ ಬಂದಿದ್ದರು ಎಂದು ಹೇಳಿದರು.
ಕಳೆದ 30 ವರ್ಷಗಳಿಂದ ನಾನು ರಾಜಕೀಯದಲ್ಲಿದ್ದೇನೆ. ಎಲ್ಲರಿಗೂ ಸಹಾಯ ಮಾಡುತ್ತೇವೆ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಆದರೆ ನನ್ನ ಹೆಸರಿನಲ್ಲಿ ಒಂದೇ ಒಂದು ಶಾಲೆಯೂ ಸಹ ಇಲ್ಲ ಎಂದು ಅವರು ಈ ಸಂದರ್ಭದಲ್ಲಿ ಅಸಮಾಧಾನವನ್ನೂ ವ್ಯಕ್ತಪಡಿಸಿದರು.
ಪ್ರಧಾನಿ ವಿರುದ್ಧ ಮಾತನಾಡಿರುವುದಕ್ಕೆ ಬಿಜೆಪಿ ವಲಯದಲ್ಲಿ ಭಾರಿ ಆಕ್ರೋಶ ಭುಗಿಲೆದಿದ್ದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕ, ಬಿಜೆಪಿ ಮುಖಂಡ ದೇವೇಂದ್ರ ಫಡ್ನವಿಸ್, ಪಂಜಾಬಿನಲ್ಲಿಯೂ ಭದ್ರತಾ ಲೋಪ ಆಗಿರುವ ಹಿಂದಿನ ವಿಚಾರ ಇನ್ನೂ ನಿಗೂಢವಾಗಿರುವಾಗಲೇ ಮಹಾರಾಷ್ಟ್ರದ ಕಾಂಗ್ರೆಸ್ ಅಧ್ಯಕ್ಷರು ಈ ರೀತಿಯಾಗಿ ಹೇಳಿಕೆ ನೀಡಿರುವುದು ಬಹಳ ಅಚ್ಚರಿ ತರುವಂಥದ್ದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.