ಸಚಿವ ರೇಪ್​ ಮಾಡಿದ್ದಾನೆ ಎಂದ ಗಾಯಕಿ: ಇದು ಅತ್ಯಾಚಾರವಲ್ಲ, ನಮಗೆ ಇಬ್ರು ಮಕ್ಕಳಿದ್ದಾರೆ ಎಂದ ನ್ಯಾಯಮಂತ್ರಿ!

rape case
Published on

ಮುಂಬೈ: ಒಂದು ರೀತಿಯ ವಿಚಿತ್ರ ಕೇಸ್​ ಮಹಾರಾಷ್ಟ್ರದಲ್ಲಿ ನಡೆದಿದೆ. ಕಾಂಗ್ರೆಸ್​ನ ಸಾಮಾಜಿಕ ಮತ್ತು ನ್ಯಾಯ ಸಚಿವ ಧನಂಜಯ್ ಮುಂಡೆ ವಿರುದ್ಧ ಕೇಳಿಬಂದಿರುವ ಅತ್ಯಾಚಾರದ ಕೇಸ್​ ಇದು. ಇವರ ವಿರುದ್ಧ ಗಾಯಕಿ ರೇಣು ಶರ್ಮಾ ದೂರು ದಾಖಲು ಮಾಡಿದ್ದರೆ, ಇದಕ್ಕೆ ಪ್ರತಿಯಾಗಿ ಸಚಿವರು ಇನ್ನೊಂದು ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ.

ಅದೇನೆಂದರೆ ಗಾಯಕಿ ರೇಣು ಅವರು, ಮುಂಡೆ ವಿರುದ್ಧ ಅತ್ಯಾಚಾರದ ಕೇಸ್​ ದಾಖಲು ಮಾಡಿದ್ದಾರೆ. ಸಚಿವರು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಪ್ರಧಾನ ಮಂತ್ರಿ ಹಾಗೂ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಫಡ್ನವೀಸ್​ ಅವರಿಗೆ ಪತ್ರ ಬರೆದಿದ್ದಾರೆ.

ಈ ಹಿಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ನನಗೆ ಜೀವಬೆದರಿಕೆ ಇದೆ. ಪ್ರಭಾವ ಬಳಸಿ ಕಾಂಗ್ರೆಸ್​ ಸಚಿವ ಮುಂಡೆ ನನ್ನ ಜೀವಕ್ಕೆ ಅಪಾಯ ತಂದಿಟ್ಟಿದ್ದಾರೆ ಎಂದು ಗಾಯಕಿ ದೂರಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಕೂಡ ಈ ವಿಷಯವನ್ನು ಅವರು ಶೇರ್​ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಮುಂಡೆ, ಗಾಯಕಿ ಮಾಡಿರುವ ಅತ್ಯಾಚಾರ ಆರೋಪವನ್ನು ತಳ್ಳಿಹಾಕಿದ್ದಾರೆ.

2003ರವರೆಗೂ ನಾನು ಮಹಿಳೆಯೊಂದಿಗೆ ಸಂಪರ್ಕದಲ್ಲಿದ್ದೆ, ನಮಗೆ ಇಬ್ಬರು ಮಕ್ಕಳಿದ್ದಾರೆ. ಮನೆಯವರೂ ಕೂಡ ನಮ್ಮಿಬ್ಬರ ಸಂಬಂಧವನ್ನು ಒಪ್ಪಿಕೊಂಡಿದ್ದರು. ಇದೀಗ ಅಕ್ಕ-ತಂಗಿ ಸೇರಿ ಬ್ಲ್ಯಾಕ್​ಮೇಲ್​ ಮಾಡುತ್ತಿದ್ದಾರೆ ಎಂದು ಧನಂಜಯ್ ಮುಂಡೆ ಹೇಳಿದ್ದಾರೆ.

ಈ ಕುರಿತು ತಾವು ಕೂಡ ಪೊಲೀಸರಲ್ಲಿ ದೂರು ದಾಖಲು ಮಾಡಿರುವುದಾಗಿ ಹೇಳಿದ್ದಾರೆ. ಈ ನಡುವೆಯೇ ತಮ್ಮಿಬ್ಬರ ನಡುವೆ ದೈಹಿಕ ಸಂಪರ್ಕ ಇತ್ತು ಎಂದು ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ, ಬಿಜೆಪಿ ಮಹಿಳಾ ಘಟಕದವರು ಸಿಎಂ ಉದ್ಧವ್ ಠಾಕ್ರೆಯವರಿಗೆ ಪತ್ರೆ ಬರೆದಿದ್ದು ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net