ಜಿಲ್ಲಾ ಕೋರ್ಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಆದವರಿಂದ ಅರ್ಜಿ ಆಹ್ವಾನ- 34 ಹುದ್ದೆಗಳು ಖಾಲಿ... ‌

udyoga-court
Published on

ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರ ಕಚೇರಿಯಲ್ಲಿ ಖಾಲಿ ಇರುವ ಜವಾನ ಹುದ್ದೆಗೆ ಅರ್ಹ ಅಭ್ಯಥಿರ್ಗಳಿಂದ ಆನ್​ಲೈನ್​ ಮೂಲಕ ಅಜಿರ್ ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳು: 34

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿನ ಜವಾನ ಹುದ್ದೆಗೆ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಶಿಕ್ಷಣ ಪಡೆದ ಅಭ್ಯಥಿರ್ಗಳು ಅಜಿರ್ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ಅಜಿರ್ ಸಲ್ಲಿಸಲು ನಿಗದಿಪಡಿಸಿರುವ ಕೊನೇ ದಿನಾಂಕಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ, ಪ್ರವರ್ಗ 1ಕ್ಕೆ ಸೇರಿದ ಅಭ್ಯಥಿರ್ಗಳಿಗೆ ಗರಿಷ್ಠ 40 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯಥಿರ್ಗಳಿಗೆ ಗರಿಷ್ಠ 38 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಜವಾನ ಹುದ್ದೆಗೆ ಮಾಸಿಕ 28,950 ರೂ. ವೇತನ ನೀಡಲಾಗುವುದು. ಆನ್​ಲೈನ್​ ಹೊರತುಪಡಿಸಿ ಉಳಿದ ಯಾವುದೇ ವಿಧಾನದಲ್ಲಿ ಸಲ್ಲಿಕೆಯಾದ ಅಜಿರ್ಗಳನ್ನು ಪರಿಗಣಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಮೀಸಲಾತಿ: ಸಾಮಾನ್ಯವರ್ಗದ ಅಭ್ಯರ್ಥಿಗಳಿಗೆ 17 ಸ್ಥಾನ, ಪ್ರವರ್ಗ 1ಕ್ಕೆ 1, ಪ್ರವರ್ಗ 2ಎಗೆ 5, 2ಬಿಗೆ 1, ಪ್ರವರ್ಗ 3ಎಗೆ 2, 3ಬಿಗೆ 2, ಎಸ್ಸಿಗೆ 5, ಎಸ್ಟಿಗೆ 1 ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಇದರಲ್ಲಿ ಗ್ರಾಮೀಣ ಅಭ್ಯರ್ಥಿಗಳಿಗೆ 12, ಮಹಿಳೆಯರಿಗೆ 9, ಮಾಜಿ ಸೈನಿಕರಿಗೆ 2, ಅಂಗವಿಕಲ ಅಭ್ಯರ್ಥಿಗಳಿಗೆ 3, ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ 1, ಯೋಜನಾ ನಿರಾಶ್ರಿತರಿಗೆ 1 ಸ್ಥಾನಗಳನ್ನು ಕಾಯ್ದಿರಿಸಲಾಗಿದೆ.

ಆಯ್ಕೆ ವಿಧಾನ: ಒಂದು ಹುದ್ದೆಗೆ 10 ಅಭ್ಯಥಿರ್ಗಳನ್ನು ಮಾತ್ರ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕದ ಆಧಾರದ ಮೇಲೆ ಅಂತಿಮ ಆಯ್ಕೆ ಮಾಡಲಾಗುವುದು.

ಅಜಿರ್ಶುಲ್ಕ: ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯಥಿರ್ಗಳನ್ನು ಹೊರತುಪಡಿಸಿ ಉಳಿದ ಅಭ್ಯಥಿರ್ಗಳು 200 ರೂ. ಅಜಿರ್ ಶುಲ್ಕವನ್ನು ಭಾರತೀಯ ಸ್ಟೇಟ್​ ಬ್ಯಾಂಕ್​ ಚಲನ್​ ಮುಖಾಂತರ ದಿನಾಂಕ 28.5.2021ರ ಒಳಗಾಗಿ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೇ ದಿನ: 25.5.2021

ಅಧಿಸೂಚನೆಗೆ: https://bit.ly/3v8dtIW

ಮಾಹಿತಿಗೆ: https://districts.ecourts.gov.in

ಹೆಚ್ಚಿನ ಉದ್ಯೋಗ ಸುದ್ದಿಗೆ ಕ್ಲಿಕ್ಕಿಸಿ: https://www.vijayavani.net/category/%e0%b2%89%e0%b2%a6%e0%b3%8d%e0%b2%af%e0%b3%8b%e0%b2%97-%e0%b2%ae%e0%b2%bf%e0%b2%a4%e0%b3%8d%e0%b2%b0/

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net