ಕಂದಕಕ್ಕೆ ಬಿದ್ದ ಮ್ಯಾಕ್ಸಿಕ್ಯಾಬ್​: ಮದುವೆಗೆ ಹೋದ 10ಕ್ಕೂ ಅಧಿಕ ಮಂದಿಯ ದಾರುಣ ಸಾವು

accident
Published on

ಚಂಪಾವತ್ (ಉತ್ತರಾಖಂಡ): ಮ್ಯಾಕ್ಸಿಕ್ಯಾಬ್​ ಒಂದು ಆಯತಪ್ಪಿ ಕಂದಕಕ್ಕೆ ಬಿದ್ದ ಪರಿಣಾಮವಾಗಿ 10ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಘಟನೆ ಉತ್ತರಾಖಂಡದ ಚಂಪಾವತ್ ಜಿಲ್ಲೆಯಲ್ಲಿ ನಡದಿದೆ.

ಇವರೆಲ್ಲರೂ ಮದುವೆ ಸಮಾರಂಭದಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದರು. ಆಳವಾದ ಕಮರಿಗೆ ಬಿದ್ದ ಹಿನ್ನೆಲೆಯಲ್ಲಿ ಮ್ಯಾಕ್ಸಿಕ್ಯಾಬ್​ನಲ್ಲಿ ಇದ್ದ ಬಹುತೇಕ ಮಂದಿ ಮೃತಪಟ್ಟಿದ್ದು, ಉಳಿದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಂಪಾವತ್ ಜಿಲ್ಲೆಯಲ್ಲಿ ಸುಖಿಧಾಂಗ್-ದಂಡಮಿನಾರ್ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ.

ಮೃತರನ್ನು ಚಂಪಾವತ್​ ಜಿಲ್ಲೆಯ ತನಕ್​ಪುರದ ನಿವಾಸಿಗಳು ಎಂದು ಗುರುತಿಸಲಾಗಿದೆ. ರಕ್ಷಣಾ ಪಡೆಗಳು ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net