ನಾಳೆಯಿಂದ ನೈಟ್​ ಕರ್ಫ್ಯೂ: ಸರ್ಕಾರದ ಈ ಅಧಿಕೃತ ಆದೇಶದಲ್ಲಿ ಎಲ್ಲ ಸಂದೇಹಗಳಿಗೆ ಪರಿಹಾರ...

curfew-edit
Published on

ಬೆಂಗಳೂರು: ನಾಳೆ ಏಪ್ರಿಲ್​ 10ರಿಂದ ರಾಜ್ಯದಲ್ಲಿ ನೈಟ್​ ಕರ್ಫ್ಯೂ ಜಾರಿ ಮಾಡಲಾಗಿದೆ. ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ-ಮಣಿಪಾಲ, ಬೀದರ್​, ಕಲಬುರಗಿ ಮತ್ತು ತುಮಕೂರು ನಗರಗಳಲ್ಲಿ 10 ರಿಂದ 20ರವರೆಗೆ (ಈ ಎರಡೂ ದಿನಗಳನ್ನು ಒಳಗೊಂಡಂತೆ) ಕರ್ಫ್ಯೂ ಜಾರಿ ಮಾಡಲಾಗಿದೆ.

ನೈಟ್​ ಕರ್ಫ್ಯೂ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿ ಇರಲಿದೆ.

ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಇರುವ ವಿಷಯಗಳು ಹೀಗಿವೆ:

* ವಿವಿಧ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿಸಲಾಗಿದೆ.

* ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ಕಾರ್ಖಾನೆಗಳು, ಕಂಪೆನಿಗಳು, ಸಂಸ್ಥೆಗಳು ಯಥಾರೀತಿ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ. ಆದರೆ, ಸಂಬಂಧಿಸಿದ ಕಾರ್ಮಿಕರು, ನೌಕರರು ಕರೊನಾ ಕರ್ಫ್ಯೂ ಅವಧಿಗೆ ಮುನ್ನವೇ ಕರ್ತವ್ಯದಲ್ಲಿ ಹಾಜರು ಇರಬೇಕು.

* ವೈದ್ಯಕೀಯ ಸೇವೆಗಳನ್ನು ಮತ್ತು ತುರ್ತು ಚಟುವಟಿಕೆಗೆ ಮಾತ್ರ ಅನುಮತಿಸಲಾಗಿದ್ದು, ಇನ್ನುಳಿದಂತೆ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಿದೆ.

* ಅತ್ಯವಶ್ಯಕ ಸೇವೆಗಳನ್ನು ಒದಗಿಸುವ ವಾಹನಗಳು, ಸರಕು ಸಾಗಾಣಿಕ ವಾನಗಳು, ಹೋಮ್ ಡೆಲಿವರಿ, ಇ- ಕಾಮರ್ಸ್​ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದೆ.

* ರಾತ್ರಿ ವೇಳೆಯಲ್ಲಿನ ಬಸ್ಸು, ರೈಲು ಹಾಗೂ ವಿಮಾನದ ದೂರ ಪ್ರಯಾಣಕ್ಕೆ ಅನುಮತಿಸಲಾಗಿದೆ. ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣದಿಂದ ಮನೆಗೆ ಅಧಿಕೃತ ಟಿಕೆಟ್​ಗಳ ಆಧಾರದ ಮೇಲೆ ಆಟೊ- ಕ್ಯಾಬ್​ ಇತ್ಯಾದಿಗಳ ಮೂಲಕ ಸಂಚರಿಸಲು ಅನುಮತಿ ನೀಡಲಾಗಿದೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಒಂದು ವೇಳೆ ಆದೇಶ ಉಲ್ಲಂಘನೆ ಮಾಡಿದರೆ ಅಂಥವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯಡಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರ ಹೇಳಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net