

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬಿಎಸ್ಸಿ ನರ್ಸಿಂಗ್, ಬಿಪಿಟಿ, ಬಿಪಿಓ ಸೇರಿದಂತೆ ವಿವಿಧ ಕೋರ್ಸ್ಗಳ ಪ್ರವೇಶಕ್ಕಾಗಿ ಇದಾಗಲೇ ಅರ್ಜಿ ಆಹ್ವಾನಿಸಿತ್ತು. ಆದರೆ ಇದನ್ನು ಸದ್ಯ ಸರ್ಕಾರ ಹಿಂದಕ್ಕೆ ಪಡೆದಿದೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಈ ಕೋರ್ಸ್ಗಳ ಪ್ರವೇಶಕ್ಕಾಗಿ ಕರೆದಿರುವ ಅರ್ಜಿಗಳನ್ನು ತಾಂತ್ರಿಕ ಕಾರಣಗಳಿಂದ ಹಿಂದಕ್ಕೆ ಪಡೆಯಲಾಗಿದೆ ಎಂದು ಹೇಳಿದೆ. ಇದೇ 4ರಂದು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಹೊರಡಿಸಿರುವ ಅಧಿಸೂಚನೆಯನ್ನು ಹಿಂದಕ್ಕೆ ಪಡೆಯಲಾಗಿದೆ.
ಪರಿಷ್ಕೃತ ಅಧಿಸೂಚನೆಯನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಅದರಲ್ಲಿ ತಿಳಿಸಲಾಗಿದೆ.