

ಚೆನ್ನೈ: ಆಡಳಿತಾರೂಢ ಎಐಡಿಎಂಕೆ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಸೋಮವಾರ ರಾಜೀನಾಮೆ ನೀಡಿದ್ದಾರೆ.
ತಮ್ಮ ಕಾರ್ಯದರ್ಶಿ ಮೂಲಕ ಸೇಲಂಗೆ ರಾಜೀನಾಮೆ ಕಳುಹಿಸಿದ್ದಾರೆ. ಪತ್ರ ಮಧ್ಯಾಹ್ನ 1 ಗಂಟೆಯೊಳಗೆ ರಾಜ್ಯಪಾಲರಿಗೆ ತಲುಪಲಿದೆ ಎಂದು ಮೂಲಗಳು ಹೇಳಿವೆ.
ಡಿಎಂಕೆ ಪಕ್ಷದ ಎಂ.ಕೆ ಸ್ಟಾಲಿನ್ ನೇತೃತ್ವದ ಹೊಸ ಸರ್ಕಾರ ಉಸ್ತುವಾರಿ ವಹಿಸಿಕೊಳ್ಳಲಿದ್ದು, ರಾಜ್ಯಪಾಲರ ಕಚೇರಿ ಪೂರ್ವಸಿದ್ಧತಾ ಕಾರ್ಯಗಳಲ್ಲಿ ತೊಡಗಿದೆ. ಮೇ 7ರಂದು ಸ್ಟಾಲಿನ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ 125 ಸ್ಥಾನಗಳನ್ನು ಗೆದ್ದರೆ, ಒ ಪನ್ನೀರ್ಸೆಲ್ವಂ ಮತ್ತು ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ 65 ಸ್ಥಾನಗಳನ್ನು ಗೆದ್ದಿದೆ. 2017ರ ಫೆಬ್ರುವರಿ 16ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.