‘ಎಲ್ಲರಿಗೂ ಸೂರು’: ಪ್ರಧಾನಿಯ ಭರವಸೆ ಈಡೇರಿಸಿದ ಬಜೆಟ್‌- 48 ಸಾವಿರ ಕೋಟಿ ರೂ. ಮೀಸಲು

Awas yojna1
Published on

ನವದೆಹಲಿ: ‘ಎಲ್ಲರಿಗೂ ಸೂರು‘ ಎಂಬ ಪ್ರಧಾನಿ ನರೇಂದ್ರ ಮೋದಿ ಕನಸಿನ ಯೋಜನೆಗೆ ಬಜೆಟ್‌ನಲ್ಲಿ ಮಾನ್ಯತೆ ಸಿಕ್ಕಿದೆ. ಈ ಮೂಲಕವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ 48 ಸಾವಿರ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದರು. ‌

2022-23ರಲ್ಲಿ 80 ಲಕ್ಷ ಮನೆಗಳನ್ನು ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ ಯೋಜನೆಯನ್ನು 2024 ರವರೆಗೆ ಮುಂದುವರಿಸುವ ಪ್ರಸ್ತಾವನೆಗೆ ಕಳೆದ ತಿಂಗಳು ಕೇಂದ್ರ ಸರ್ಕಾರವು ಅನುಮೋದನೆ ನೀಡಿತ್ತು. ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ ಅಡಿಯಲ್ಲಿ 2.95 ಕೋಟಿ ಪಕ್ಕಾ ಮನೆಗಳನ್ನು ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, ಈ ಪೈಕಿ ನವೆಂಬರ್ 2021 ರ ವೇಳೆಗೆ 1.65 ಕೋಟಿ ಪಕ್ಕಾ ಮನೆಗಳನ್ನು ನಿರ್ಮಿಸಲಾಗಿದೆ. ಉಳಿದ ಕುಟುಂಬಗಳು ಸಹ ಈ ನಿರ್ಧಾರದಿಂದ ತಮ್ಮ ಪಕ್ಕಾ ಮನೆಗಳನ್ನು ನಿರ್ಮಿಸಿಕೊಳ್ಳಬಹುದು,

2021ರ ಮಾರ್ಚ್‌ರವರೆಗೆ, ಈ ಯೋಜನೆ ಅಡಿ ಗ್ರಾಮೀಣ ವಿಭಾಗದಲ್ಲಿ 1.97 ಲಕ್ಷ ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಈ ಪೈಕಿ ಕೇಂದ್ರ ಸರ್ಕಾರ 1,44,162 ಕೋಟಿ ರೂ. ವೆಚ್ಚ ಭರಿಸಿದೆ. ಉಳಿದ ಪಕ್ಕಾ ಮನೆಗಳ ನಿರ್ಮಾಣಕ್ಕೆ ಸರ್ಕಾರ 2,17,257 ಕೋಟಿ ರೂ.ಗೆ ಅನುಮೋದನೆ ನೀಡಿದ್ದು, 2024ರ ವೇಳೆಗೆ ಉಳಿದ ಕುಟುಂಬಗಳಿಗೆ ಪಕ್ಕಾ ಮನೆಗಳನ್ನು ನೀಡುವ ಗುರಿಯನ್ನು ಹೊಂದಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net