

ಗೊಟ್ಕಿ(ಪಾಕಿಸ್ತಾನ): ಎರಡು ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 30ಕ್ಕೂ ಅಧಿಕ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.
ಸರ್ ಸೈಯದ್ ಎಕ್ಸ್ ಪ್ರೆಸ್ ರೈಲು ಮತ್ತು ಮಿಲ್ಲಟ್ ಎಕ್ಸ್ ಪ್ರೆಸ್ ಮಧ್ಯೆ ಡಿಕ್ಕಿ ಸಂಭವಿಸಿದೆ. ಗೊಟ್ಕಿ ಜಿಲ್ಲೆಯಲ್ಲಿ ನಡೆದಿರುವ ಈ ಭಯಾನಕ ಅಪಘಾತದಲ್ಲಿ ನೂರಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.