

ಪಾಲ್ಘರ್ (ಮಹಾರಾಷ್ಟ್ರ): ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಆಗಿರುವ ಅಗೌಡಗಳು ಅಷ್ಟಿಷ್ಟಲ್ಲ. ಎಷ್ಟೋ ಮಂದಿ ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಆದರೂ ಜನರು ಇಂಥ ದುಸ್ಸಾಹಸಕ್ಕೆ ಕೈಹಾಕುತ್ತಲೇ ಇರುತ್ತಾರೆ.
ಅಂಥದ್ದೇ ಒಂದು ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಾಸೈ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. ಚಲಿಸುತ್ತಿರುವ ರೈಲನ್ನು ಹತ್ತಲು ಹೋಗಿ ಆಯತಪ್ಪಿ, ರೈಲಿನಡಿ ಮಹಿಳೆ ಬಿದ್ದಿದ್ದಾಳೆ. ಈ ಭಯಾನಕ ದೃಶರ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅದೃಷ್ಟವಶಾತ್ ಜನರು ಓಡಿ ಬಂದು ಮಹಿಳೆಯನ್ನು ರಕ್ಷಿಸಿದ್ದಾರೆ. ಭಾರತೀಯ ರೈಲ್ವೇ ಇಲಾಖೆಯು ಈ ವಿಡಿಯೋ ಬಿಡುಗಡೆ ಮಾಡಿದ್ದು, ಜನರು ಜಾಗೃತರಾಗಿ ಇರಬೇಕು ಎಂದು ಪುನಃ ಮನವಿ ಮಾಡಿದೆ. ಚಲಿಸುತ್ತಿದ್ದ ರೈಲಿಗೆ ಹತ್ತಲು ಯತ್ನಿಸುವ ವೇಳೆ ಆಯತಪ್ಪಿ ಕೆಳಗೆ ಬಿದ್ದದ್ದು ಹಾಗೂ ಪ್ರಯಾಣಿಕರು ಆಕೆಯನ್ನು ರಕ್ಷಿಸಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ.
ವಿಡಿಯೋ ಇಲ್ಲಿದೆ