ಮುಂದುವರೆಯಲಿದೆ ವರುಣನ ಆರ್ಭಟ- ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

06TMK_Rain 2
Published on

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಮುಂದಿನ 2 ದಿನ ಮುಂದುವರಿಯಲಿದೆ.

ಉಡುಪಿ,ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ನ.15ರಂದು ಹೆಚ್ಚು ಮಳೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೆ, ಈ ಭಾಗಗಳಲ್ಲಿ ನ.16ರಂದು ಯೆಲ್ಲೋ ಅಲರ್ಟ್ ಇರಲಿದೆ.

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net