

ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆ ಭಾನುವಾರ ಮೈಸೂರು ತಲುಪಿತ್ತು. ಬಂಡೀಪಾಳ್ಯ ಸಮೀಪ ಆಯೋಜಿಸಿದ್ದ ಸಭೆಯಲ್ಲಿ ರಾಹುಲ್ ಗಾಂಧಿ ಭಾಷಣ ಮಾಡುತ್ತಿದ್ದಾಗಲೇ ಭಾರಿ ಮಳೆ ಬಂದಿದೆ. ಆದರೆ ಅದನ್ನೂ ಲೆಕ್ಕಿಸಿದ ರಾಹುಲ್ ಗಾಂಧಿ ಭಾಷಣ ಮಾಡಿದ್ದು, ಇದರ ವಿಡಿಯೋ ಭಾರಿ ವೈರಲ್ ಆಗಿದೆ.
ರಾಹುಲ್ ಗಾಂಧಿಯವರ ಮಳೆಯ ಭಾಷಣದ ವಿಡಿಯೋವನ್ನು ಕಾಂಗ್ರೆಸ್ ಅಭಿಮಾನಿಗಳು ಹಂಚಿಕೊಳ್ಳುತ್ತಿದ್ದು, ಅದಕ್ಕೆ ಥಹರೇವಾರಿ ಕಮೆಂಟ್ಗಳ ಸುರಿಮಳೆಯಾಗಿದೆ. ರಾಹುಲ್ ಅಭಿಮಾನಿಗಳು ತಮ್ಮ ನಾಯಕನ ಈ ಕಾರ್ಯವನ್ನು ಬಹುವಾಗಿ ಮೆಚ್ಚಿಕೊಂಡಿದ್ದಾರೆ.
ಈ ವಿಡಿಯೋಗೆ ಇದೀಗ ಮಾಜಿ ಸಂಸದೆ, ನಟಿ ರಮ್ಯಾ ಕೂಡ ಹಂಚಿಕೊಂಡಿದ್ದು ತಾವೂ ಕಮೆಂಟ್ ಮಾಡಿದ್ದಾರೆ. ಇಲ್ಲಿ ರಾಹುಲ್ ಗಾಂಧಿ ಮಳೆಯಲ್ಲಿ ಭಾಷಣ ಮಾಡುತ್ತಿರುವುದು ಸುದ್ದಿಯೇ ಅಲ್ಲ, ಬದಲಿಗೆ ಅಂಥ ಭಾರಿ ಮಳೆಯಲ್ಲಿಯೂ ಭಾಷಣ ಕೇಳಲು ಸಾಕಷ್ಟು ಮಂದಿ ನೆರೆದಿರುವುದೇ ವಿಶೇಷ. ಜನ ನೆರೆದಿರುವುದೇ ಎಲ್ಲವನ್ನೂ ನಿಮಗೆ ತಿಳಿಸುತ್ತದೆ. ಅಂದರೆ ರಾಹುಲ್ ಗಾಂಧಿ ಭಾಷಣ ಕೇಳಲು ಜನ ಕಿಕ್ಕಿರಿದು ನಿಂತಿರುವುದು ಗಮನ ಸೆಳೆದಿದೆ ಎಂದು ರಮ್ಯಾ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಈ ಭಾಷಣದಲ್ಲಿ ರಾಹುಲ್ ಗಾಂಧಿಯವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಮಳೆಯಲ್ಲಿಯೇ ವಾಗ್ದಾಳಿ ನಡೆಸಿದರು. ಯಾವ ಮಳೆಯೂ ನನ್ನ ಭಾಷಣವನ್ನು ತಡೆಯಲು ಸಾಧ್ಯವಿಲ್ಲ ಎಂದೂ ಹೇಳಿದರು. (ಏಜೆನ್ಸೀಸ್)