

ಶಹರಾನಪುರ (ಉತ್ತರ ಪ್ರದೇಶ): ಅತ್ಯಾಚಾರ ಮಾಡಿದ್ದೂ ಅಲ್ಲದೇ, ಅದನ್ನು ರಿಕಾರ್ಡ್ ಮಾಡಿಕೊಂಡು ಅದನ್ನು ಜಾಲತಾಣದಲ್ಲಿ ಹರಿಬಿಟ್ಟ ಪಾಪಿಗಳಿಂದಾಗಿ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡಿರುವ ವಿಷಾದಕರ ಘಟನೆ ಉತ್ತರ ಪ್ರದೇಶದ ಶಹರಾನಪುರದಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಹರ್ಬರ್ ಹಾಗೂ ನೂಮನ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
17 ವರ್ಷದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿಷ ಸೇವನೆ ನಂತರ ಅವಳನ್ನು ಸ್ಥಳೀಯ ಶಹರಾನಪುರದ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಕಕಾರಿಯಾಗದೇ ಮೃತಪಟ್ಟಿದ್ದಾಳೆ.
ಯುವತಿಯ ಸಹೋದರ ನೀಡಿರುವ ದೂರಿನ ಆಧಾರದ ಮೇಲೆ ಕೇಸನ್ನು ದಾಖಲು ಮಾಡಿಕೊಳ್ಳಲಾಗಿದೆ.
ನೂಮನ್ ಎಂಬಾತ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ, ಆತನ ಚಾಲಕ ರರ್ಬರ್ ಕೃತ್ಯದ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ. ಈ ವಿಡಿಯೋ ಇಟ್ಟುಕೊಂಡು ಆರೋಪಿಗಳು ಯುವತಿಯನ್ನು ಬ್ಲ್ಯಾಕ್‍ಮೇಲ್ ಮಾಡಲು ಆರಂಭಿಸಿದ್ದರು. ಅವರ ಮಾತನ್ನು ಯುವತಿ ಕೇಳದಿದ್ದ ಕಾರಣ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದಾನೆ ಪಾಪಿ. ಇದರಿಂದಾಗಿ ಯುವತಿ ಒತ್ತಡಕ್ಕೊಳಗಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.