ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಎಸ್‌ಬಿಐ: 90 ಸಾವಿರ ರೂವರೆಗೆ ಸಂಬಳ

SBI
Published on

ಮುಂಬೈ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ (ಎಸ್‌ಬಿಐ) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಇದರಲ್ಲಿ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಚೀಫ್​​ ಮ್ಯಾನೇಜರ್ ಸೇರಿದಂತೆ 15 ಹುದ್ದೆಗಳು ಖಾಲಿ ಇವೆ. ಬಿಇ, ಬಿ.ಟೆಕ್​, ಎಲ್‌ಎಲ್‌ಬಿ, ಸಿಎ, ಎಂಬಿಎ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು. ಜ.13 ಕೊನೆಯ ದಿನವಾಗಿದೆ. ಮುಂಬೈ ಬ್ಯಾಂಕ್‌ಗಳಲ್ಲಿ ಈ ಹುದ್ದೆ ಖಾಲಿ ಇವೆ.

ಈ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.

ಒಟ್ಟು 15 ಹುದ್ದೆಗಳ ಮಾಹಿತಿ ಇಂತಿದೆ:

ಚೀಫ್​​ ಮ್ಯಾನೇಜರ್ -2

ಮ್ಯಾನೇಜರ್-6

ಡೆಪ್ಯುಟಿ ಮ್ಯಾನೇಜರ್-7

ಒಟ್ಟು-15

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್​, ಎಲ್‌ಎಲ್‌ಬಿ, ಸಿಎ, ಅಥವಾ ಎಂಬಿಎ ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ: ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಚೀಫ್​​ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ಮತ್ತು SC/ST/PWD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ : ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ವಿವಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 45 ವರ್ಷ ಮೀರಿರಬಾರದು.

‌ವೇತನ: ಮಾಸಿಕ 48,170 ರಿಂದ 89,890 ರೂ.

ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್​​ಲಿಸ್ಟಿಂಗ್​ ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಮುಂಬೈನಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ.

ವಿಶೇಷ ಭದ್ರತಾ ಅಧಿಕಾರಿ ಹುದ್ದೆ:

ಎಸ್‌ಬಿಐ 25 ವಿಶೇಷ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಯಾವುದೇ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್​ಲೈನ್ ​ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜ.7.

ವಿದ್ಯಾರ್ಹತೆ: ಯಾವುದೇ ಒಂದು ಪದವಿ.

ವಯಸ್ಸು: 25-40 ವರ್ಷ.

ಆಯ್ಕೆ ಪ್ರಕ್ರಿಯೆ: ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ: https://bit.ly/3Ho8Gcw

ಎಸ್‌ಬಿಐನಲ್ಲಿರುವ ವಿವಿಧ ಹುದ್ದೆಗಳ ಬಗ್ಗೆ ಪರಿಶೀಲನೆಗೆ: https://www.sbi.co.in/web/careers/current-openings

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net