

ಕಾರ್ಗಹಾರ್ (ಬಿಹಾರ): ಬಿಹಾರದ ಕಾರ್ಗಹಾರ್ ಶಾಸಕ ಸಂತೋಷ್ ಮಿಶ್ರಾ ಅವರ ಸೋದರಳಿಯನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.
ಶಾಸಕ ಸಂತೋಷ್ ಮಿಶ್ರಾ ಸೋದರಳಿಯ ಸಂಜೀವ್ ಮಿಶ್ರಾ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿ ಬಂದ ಮೂವರು ಬಂದೂಕುಧಾರಿಗಳು ಈ ಕೃತ್ಯ ಎಸಗಿದ್ದಾರೆ. ನಿನ್ನೆ ಶನಿವಾರ ರಾತ್ರಿ ಈ ಘಟನೆ ನಡೆದಿದೆ.
ಇವರನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿತ್ತು. ಅದರಂತೆ ಸಂಜೀವ್ ಮಿಶ್ರಾ ಅವರು ಮನೆಯಿಂದ ಹೊರಬಂದಾಗ ಅವರ ಮೇಲೆ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕೂಡಲೇ ಸಾಗಿಸಲಾಯಿತಾದರೂ ನಡುರಸ್ತೆಯಲ್ಲಿಯೇ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಈ ಕೊಲೆಗೆ ನಿಖರವಾದ ಕಾರಣಗಳು ತಿಳಿದುಬಂದಿಲ್ಲ. ಆದರೆ ಸಂಜೀವ್ ಮಿಶ್ರಾ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಂತೋಷ್ ಮಿಶ್ರಾ ಪರವಾಗಿ ಪ್ರಚಾರ ಮಾಡಿದ್ದರು. ಈ ಬಾರಿ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಸಂಜೀವ್ ಮಿಶ್ರಾ ಯೋಜನೆ ಹಾಕಿಕೊಂಡಿದ್ದರು.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ