ಸಚಿವ ಶ್ರೀರಾಮುಲು ಗುಣಮುಖ: ಆಸ್ಪತ್ರೆಯಿಂದ ಡಿಸ್‌ಚಾರ್ಜ್‌

shreeramulu
Published on

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರೊನಾ ಸೋಂಕಿನಿಂದ ಬಳಲುತ್ತಿದ್ದ ಆರೋಗ್ಯ ಸಚಿವ ಶ್ರೀರಾಮುಲು ಅವರು ಇಂದು ಗುಣಮುಖರಾಗಿದ್ದಾರೆ.

ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುತ್ತಿದ್ದ ಶ್ರೀರಾಮುಲು ಅವರಿಗೆ ಕರೊನಾ ನೆಗೆಟಿವ್‌ ಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಲಾಗಿದೆ.

ಕರೊನಾ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಶ್ರೀರಾಮುಲು ಹೇಳಿದ್ದರು.

ಇದೀಗ ಸಂಪೂರ್ಣ ಗುಣಮುಖರಾಗಿದ್ದು, ವೈದ್ಯರ ಸಲಹೆ ಮೇರೆಗೆ ಸ್ವಲ್ಪ ದಿನಗಳ ಮಟ್ಟಿಗೆ ವಿಶ್ರಾಂತಿ ಪಡೆಯಲಿದ್ದಾರೆ.

ಶ್ರೀರಾಮುಲು ಅವರ ತಾಯಿ ಹಾಗೂ ಸಹೋದರರಿಗೂ ಸೋಂಕು ತಗುಲಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net