ಸುಶೀಲ್ ಕುಮಾರ್ ಮೋದಿ ರಾಜ್ಯಸಭೆಗೆ ಅವಿರೋಧ ಆಯ್ಕೆ

susheelkumar
Published on

ನವದೆಹಲಿ: ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ ಸಂಸ್ಥಾಪಕ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದ ಹಿನ್ನೆಲೆಯಲ್ಲಿ, ಬಿಹಾರದ ಹಿರಿಯ ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ ಅವರನ್ನು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಇಂದು ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆ ದಿನವಾಗಿತ್ತು. ಸ್ವತಂತ್ರ ಅಭ್ಯರ್ಥಿಯಾಗಿದ್ದ ಶ್ಯಾಮ್ ನಂದನ್ ಪ್ರಸಾದ್ ಅವರು ನಾಮಪತ್ರ ಸಲ್ಲಿಸಿದ್ದರು.

ಆದರೆ 243 ಮಂದಿ ವಿಧಾನಸಭೆಯ ಸದಸ್ಯರ ಪೈಕಿ ಶ್ಯಾಮ್​ ನಂದನ್​ ಪ್ರಸಾದ್​ ಅವರಿಗೆ 10ಕ್ಕಿಂತಲೂ ಕಡಿಮೆ ಬೆಂಬಲ ಸಿಕ್ಕಿದ್ದ ಹಿನ್ನೆಲೆಯಲ್ಲಿ ಅದನ್ನು ತಿರಸ್ಕರಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಸುಶೀಲ್​ ಕುಮಾರ್​ ಅವರ ನಾಮಪತ್ರವೊಂದೇ ಇದ್ದುದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಅಡಲಾಗಿದೆ.

ಸುಶೀಲ್ ಮೋದಿಯವರಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ಹಲವಾರು ಗಣ್ಯರ ಸಮ್ಮುಖದಲ್ಲಿ ಅವರ ಪ್ರಮಾಣಪತ್ರವನ್ನು ಹಸ್ತಾಂತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net