ಶಾಸಕ ರಘುಪತಿ ಭಟ್​ಗೆ ಕರೊನಾ: ಆಸ್ಪತ್ರೆಗೆ ದಾಖಲು

raghupati bhat
Published on

ಉಡುಪಿ : ಶಾಸಕ ರಘುಪತಿ ಭಟ್‌ ಅವರಿಗೆ ಕರೊನಾ ಸೋಂಕು ಧೃಡಪಟ್ಟಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಕುರಿತು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಚಿಕಿತ್ಸೆ ಪಡೆಯುತ್ತಿರುವ ಕಾರಣ ಕರೆಗಳಿಗೆ ಸ್ಪಂದಿಸಲು ಸಾದ್ಯವಾಗುತ್ತಿಲ್ಲ. ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್‌ಗೆ ಒಳಗಾಗಿ ಜಾಗ್ರತೆ ವಹಿಸಬೇಕು ಎಂದು ಟ್ವಿಟರ್​ನಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.

ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿರುತ್ತೇನೆ. ಚಿಕಿತ್ಸೆ ಕಾರಣ ಸ್ವಲ್ಪ ದಿನ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ ಎಂದು ಹೇಳಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net