10ನೇ ತರಗತಿ ಪಾಸಾದ ಮಹಿಳೆಯರಿಗೆ ಒಳ್ಳೇ ಅವಕಾಶ: ಗ್ರಾಮ ಪಂಚಾಯ್ತಿಗಳಲ್ಲಿ ನೇಮಕಾತಿ

jobs1
Published on

 ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಮೈಸೂರು ಜಿಲ್ಲೆಯ 57 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಕಾಯಕಮಿತ್ರ ಹುದ್ದೆಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶವಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಹೆಚ್ಚಿನ ಮಾಹಿತಿ ಬೇಕಿದ್ದರೆ 8 ತಾಲೂಕು ವ್ಯಾಪ್ತಿಯಲ್ಲಿ ಬರುವ ಆಯಾ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಲು ತಿಳಿಸಲಾಗಿದೆ. ಮಾಸಿಕ 6,000 ರೂ. ಗೌರವಧನ ನಿಗದಿಯಾಗಿದೆ.

ಅರ್ಹತೆಗಳೇನು?

* ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು.

* ದಿನಾಂಕ 1.1.2021ಕ್ಕೆ ಅನ್ವಯಿಸುವಂತೆ ತಾವು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್‍ಕಾರ್ಡ್ ಹೊಂದಿರಬೇಕು.

* ಅಭ್ಯರ್ಥಿಯು ಕಳೆದ 3 ವರ್ಷಗಳಲ್ಲಿ (2018-19, 2019-20, 2020-21) ಕನಿಷ್ಠ 2 ವರ್ಷ ಯೋಜನೆಯಡಿ ಅಕುಶಲ ಕೂಲಿಕಾರರಾಗಿ ಕೆಲಸ ನಿರ್ವಹಿಸಬೇಕು.

* 2021ರ ಜನವರಿ 1ಕ್ಕೆ ಅನ್ವಯವಾಗುವಂತೆ ಗರಿಷ್ಠ 45 ವರ್ಷ ಮೀರಿರಬಾರದು.

* ಓದು- ಬರಹ ತಿಳಿದಿರಬೇಕು.

* ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

* ಸಂವಹನ ಕೌಶಲ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣ ಲಕ್ಷಣಗಳನ್ನು ಹೊಂದಿರಬೇಕು.

* ಗ್ರಾಮ ರೋಜ್‍ಗಾರ್ ಮಿತ್ರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕಾಗಿದ್ದು, ಇದಕ್ಕೆ ಗ್ರಾಮ ರೋಜ್‍ಗಾರ್ ಮಿತ್ರರ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು.

ಅರ್ಜಿ ಸಲ್ಲಿಸಲು ಕೊನೇ ದಿನ: 15.4.2021

ಅಧಿಸೂಚನೆಗೆ: https://bit.ly/3sZodbY

ಮಾಹಿತಿಗೆ: https://mysore.nic.in

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net