ಟೈಪಿಂಗ್‌, ಷಾರ್ಟ್‌ಹ್ಯಾಂಡ್‌ ಬಲ್ಲವರಿಗೆ ಬೀದರ್​ ಕೋರ್ಟ್​ನಲ್ಲಿದೆ 21 ಹುದ್ದೆಗಳು

udyoga- bidar
Published on

ಬೀದರ್​ನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿರುವ ಶ್ರೀಲಿಪಿಗಾರ ಗ್ರೇಡ್​-3 ಹಾಗೂ ಟೈಪಿಸ್ಟ್​ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭತಿರ್ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳು ಹಿಂಬಾಕಿ ಹುದ್ದೆಗಳಾಗಿದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿಸಲ್ಲಿಸಬಹುದು. ಆನ್​ಲೈನ್​ ಹೊರತು ಪಡಿಸಿ ಇನ್ನಾವುದೇ ರೀತಿಯಲ್ಲಿ ಅರ್ಜಿಸಲ್ಲಿಸಿದರೂ ಅದನ್ನು ತಿರಸ್ಕರಿಸಲಾಗುವುದು ಎಂದು ತಿಳಿಸಲಾಗಿದೆ. ಒಂದಕ್ಕಿಂತ ಹೆಚ್ಚು ಹುದ್ದೆಗೆ ಅರ್ಜಿಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಯಾ ಹುದ್ದೆಗೆ ಪ್ರತ್ಯೇಕವಾಗಿ ನಿಗದಿಪಡಿಸಿರುವ ಅರ್ಜಿನಮೂನೆಯಲ್ಲಿ ಅರ್ಜಿಸಲ್ಲಿಸತಕ್ಕದ್ದು. ಹುದ್ದೆಗಳಲ್ಲಿ ಸಾಮಾನ್ಯವರ್ಗ, ಗ್ರಾಮೀಣ, ಮಹಿಳಾ, ಯೋಜನ ನಿರಾಶ್ರಿತರು, ಅಂಗವಿಕಲ, ಪ್ರವರ್ಗ 1, 2ಎ, 2ಬಿ, 3ಎ, 3ಬಿ, ಎಸ್ಸಿ, ಎಸ್ಟಿ, ಮಾಜಿ ಸೈನಿಕ ಎಂದು ಮೀಸಲಾತಿ ನಿಗದಿಪಡಿಸಲಾಗಿದೆ.

ಹುದ್ದೆ ವಿವರ

* ಸ್ಟೆನೋಗ್ರರ್​ ಗ್ರೇಡ್​ 3 - 12

(ಸ್ಥಳಿಯ ವೃಂದದ ಹುದ್ದೆ: 9, ಉಳಿದ ಮೂಲ ವೃಂದದ ಹುದ್ದೆ: 3)

ದ್ವೀತಿಯ ಪಿಯುಸಿ ಅಥವಾ 3 ವರ್ಷದ ಡಿಪ್ಲೊಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲಿಷ್​ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶ್ರೀಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮಾಸಿಕ 27,650- 52,650 ರೂ. ಹಾಗೂ ವಿಶೇಷ ಭತ್ಯೆ ನೀಡಲಾಗುವುದು.

* ಟೈಪಿಸ್ಟ್​ (ಸ್ಥಳಿಯ ವೃಂದ)- 9

ದ್ವೀತಿಯ ಪಿಯುಸಿ/ 3 ವರ್ಷದ ಡಿಪ್ಲೊಮಾ/ ತತ್ಸಮಾನ ಶಿಕ್ಷಣ ಪಡೆದಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲಿಷ್​ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶ್ರೀಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮಾಸಿಕ 21,400- 42,000 ರೂ. ಹಾಗೂ ವಿಶೇಷ ಭತ್ಯೆ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಅಂಕ ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಯಂತ್ರ/ ಕಂಪ್ಯೂಟರ್​ ಮುಖಾಂತರ ಬೆರಳಚ್ಚು ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕ ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ, ಮೀಸಲಾತಿ ಅಭ್ಯರ್ಥಿಗಳಿಗೆ 38, 40 ವರ್ಷ ವಯೋಮಿತಿ ನಿಗದಿಯಾಗಿದೆ.

ಅರ್ಜಿಶುಲ್ಕ: ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 100 ರೂ., ಉಳಿದ ಅಭ್ಯರ್ಥಿಗಳಿಗೆ 200 ರೂ. ಅರ್ಜಿಶುಲ್ಕ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೇ ದಿನ: 9.10.2021

ಅಧಿಸೂಚನೆಗೆ: https://bit.ly/3k8AqsO

ಮಾಹಿತಿಗೆ: http://districts.ecourts.gov.in

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net