ಬಿಇ, ಬಿಟೆಕ್‌ ಪದವೀಧರರಿಗೆ ಬಿಇಎಲ್‌ನಲ್ಲಿದೆ ಉದ್ಯೋಗಾವಕಾಶ: ನಾಳೆಯೇ ಕೊನೆಯ ದಿನ

BEL
Published on

ಬೆಂಗಳೂರಿನ ಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​ನಲ್ಲಿನ (ಬಿಇಎಲ್​) ಸ್ಟ್ರಾಟೆಜಿಕ್​ ಕಮ್ಯುನಿಕೇಷನ್​ ಆ್ಯಂಡ್​ ಅನ್​ಮ್ಯಾನ್ಡ್​ ಸಿಸ್ಟಮ್​ ಎಸ್​ಬಿಯು ಕಾಂಪ್ಲೆಕ್ಸ್​ನಲ್ಲಿ ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಒಟ್ಟು ಹುದ್ದೆಗಳು: 9

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ, ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ಬೆಂಗಳೂರಿನ ಬಿಇಎಲ್​ನಿಂದ ನೇಮಕ ಮಾಡಿಕೊಳ್ಳುವ ಅಭ್ಯರ್ಥಿಗಳನ್ನು ಬೆಂಗಳೂರಿನ ಘಟಕದಲ್ಲೇ ನೇಮಕ ಮಾಡಲಾಗುವುದು. 9 ಹುದ್ದೆಗಳಲ್ಲಿ ಸಾಮಾನಯವರ್ಗದ ಅಭ್ಯರ್ಥಿಗೆ 3 ಸ್ಥಾನ, ಇತರ ಹಿಂದುಳಿದ ವರ್ಗಕ್ಕೆ 3, ಎಸ್​ಸಿ -1, ಎಸ್​ಟಿಗೆ 1, ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳಿಗೆ 1 ಸ್ಥಾನ ಮೀಸಲಿರಿಸಲಾಗಿದೆ.

ಹುದ್ದೆಗಳ ಮಾಹಿತಿ
* ಟ್ರೈನಿ ಇಂಜಿನಿಯರ್​ ಐ – 6
* ಪ್ರಾಜೆಕ್ಟ್​ ಇಂಜಿನಿಯರ್​ ಐ – 3

ಶೈಕ್ಷಣಿಕ ಅರ್ಹತೆ: ಏರೋಸ್ಪೇಸ್​/ ಏರೋನಾಟಿಕಲ್​ ಇಂಜಿನಿಯರಿಂಗ್​ನಲ್ಲಿ ಬಿಇ, ಬಿ.ಟೆಕ್​/ ಬಿಎಸ್ಸಿ/ ಎಂಇ/ ಎಂಟೆಕ್​ ಪದವಿ ಪಡೆದಿರಬೇಕು.

ವಯೋಮಿತಿ: 1.5.2021ಕ್ಕೆ ಅನ್ವಯವಾಗುವಂತೆ ಟ್ರೇನಿ ಇಂಜಿನಿಯರ್​ಗೆ ಗರಿಷ್ಠ 25 ವರ್ಷ, ಪ್ರಾಜೆಕ್ಟ್​ ಇಂಜಿನಿಯರ್​ಗೆ ಗರಿಷ್ಠ 28 ವರ್ಷ. ಸರ್ಕಾರದ ನಿಯಮದನ್ವಯ ಮೀಸಲಾತಿ ಅಭ್ಯರ್ಥಿಗಳಿಗೆ 3 ರಿಂದ 10 ವರ್ಷ ವಯೋ ಸಡಿಲಿಕೆ ಇದೆ.

ವೇತನ: ಟ್ರೇನಿ ಇಂಜಿನಿಯರ್​ಗೆ ಮೊದಲ ವರ್ಷ ಮಾಸಿಕ 25,000 ರೂ. 2ನೇ ವರ್ಷ ಮಾಸಿಕ 28,000, 3ನೇ ವರ್ಷ 31,000 ರೂ. ವೇತನ ನಿಗದಿಪಡಿಸಲಾಗಿದೆ. ಪ್ರಾಜೆಕ್ಟ್​ ಇಂಜಿನಿಯರ್​ಗೆ ಮೊದಲ ವರ್ಷ ಮಾಸಿಕ 35,000 ರೂ., 2ನೇ ವರ್ಷ 40,000 ರೂ., 3ನೇ ವರ್ಷ 45,000 ರೂ. ವೇತನ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಶೈಕ್ಷಣಿಕ ಅಂಕ, ವೃತ್ತಿ ಅನುಭವ ಆಧರಿಸಿ ಸಿದ್ಧಪಡಿಸಲಾದ ಆಯ್ದಪಟ್ಟಿಯಲ್ಲಿನ ಅಭ್ಯರ್ಥಿಗಳನ್ನು ಕೌಶಲ ಪರೀಕ್ಷೆಗೆ ಆಹ್ವಾನಿಸಲಾಗುವುದು. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂದರ್ಶನದ ದಿನಾಂಕ ಹಾಗೂ ವಿವರಗಳನ್ನು ಮೇಲ್​ ಮೂಲಕ ತಿಳಿಸಲಾಗುವುದು.

ಅರ್ಜಿ ಶುಲ್ಕ: ಎಸ್​ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ ಟ್ರೇನಿ ಇಂಜಿನಿಯರ್​ ಹುದ್ದೆಗೆ 200 ರೂ., ಪ್ರಾಜೆಕ್ಟ್​ ಇಂಜಿನಿಯರ್​ ಹುದ್ದೆಗೆ 500 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೇ ದಿನ: 9.6.2021
ಅಧಿಸೂಚನೆಗೆ: https://bit.ly/3wCc9Pm

ಮಾಹಿತಿಗೆ: https://www.bel-india.in

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net