ಲಂಚಕ್ಕೆ ಬೇಡಿಕೆ ಇಟ್ಟು ಅಮಾನತುಗೊಂಡ ಹೆಡ್‌ ಕಾನ್‌ಸ್ಟೆಬಲ್‌: ಆಡಿಯೋದಿಂದ ಕೃತ್ಯ ಬಹಿರಂಗ

bribe
Published on

ವಿಜಯನಗರ: ಕೆಲವೊಂದನ್ನು ಮಾಡಿಕೊಡುವ ನಿಟ್ಟಿನಲ್ಲಿ ವ್ಯಕ್ತಿಯೊಬ್ಬರಿಂದ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಹೊತ್ತ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಸಿಪಿಐ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮುಖ್ಯ ಕಾನ್ಸ್‌ಟೆಬಲ್‌ ಬಸವರಾಜ್ ಅವರನ್ನು ಅಮಾನತು ಮಾಡಲಾಗಿದೆ.

ಇವರು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಬಗ್ಗೆ ಆಡಿಯೋ ಒಂದನ್ನು ಮಾಡಲಾಗಿತ್ತು. ಅದನ್ನು ಆಧರಿಸಿ ಈ ಶಿಕ್ಷೆ ನೀಡಲಾಗಿದೆ. ಈ ಆಡಿಯೋ ಕುರಿತಂತೆ ತನಿಖೆ ನಡೆಯುತ್ತಿದೆ.

ಸದ್ಯ ಇದರ ವಿಚಾರಣೆ ನಡೆಯುತ್ತಿದ್ದು, ವಿಚಾರಣೆಯಲ್ಲಿ ಸತ್ಯಾಂಶ ಸಾಬಿತಾದರೆ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ವಿಜಯನಗರ ಎಸ್ಪಿ ಡಾ.ಅರುಣ್ ಕೆ. ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net