ವಿವಿಧ ಇಂಜಿನಿಯರಿಂಗ್‌ ಪದವೀಧರರಿಗೆ ಬಿಇಎಲ್​ನಿಂದ 84 ಹುದ್ದೆಗಳಿಗೆ ಅರ್ಜಿ ಆಹ್ವಾನ

BEL
Published on

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನವರತ್ನ ಸಂಸ್ಥೆಗಳಲ್ಲಿ ಒಂದಾಗಿದ್ದು, ಪ್ರಸ್ತುತ ಹೈದರಾಬಾದ್ ಘಟಕದಲ್ಲಿ ಕಾರ್ಯನಿರ್ವಹಿಸಲು ಇಂಜಿನಿಯರ್​ಗಳ ಹುಡುಕಾಟದಲ್ಲಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು: 84

ಬಿಇಎಲ್​ನಲ್ಲಿ ಟ್ರೇನಿ ಹಾಗೂ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿದ್ದು, ಆರಂಭದಲ್ಲಿ ಅಭ್ಯರ್ಥಿಗಳನ್ನು ಹೈದರಾಬಾದ್​ನ ಘಟಕಕ್ಕೆ ನೇಮಕ ಮಾಡಲಾಗುವುದು ನಂತರ ದೇಶದ ಯಾವುದೇ ಭಾಗಕ್ಕಾದರೂ ವರ್ಗಾವಣೆ ಮಾಡಬಹುದಾಗಿದೆ. ಇದಕ್ಕೆ ಸಿದ್ಧರಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಟ್ರೇನಿ ಇಂಜಿನಿಯರ್ ಹುದ್ದೆಯು 1 ವರ್ಷ ಹಾಗೂ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಯು 2 ವರ್ಷದ ಅವಧಿಗೆ ಒಳಪಟ್ಟಿದ್ದು, ಕಾರ್ಯಾವಧಿಯನ್ನು ಮತ್ತೆ 3-4 ವರ್ಷ ವಿಸ್ತರಿಸಬಹುದು. ಶಿಫ್ಟ್​ನಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರಬೇಕು ಹಾಗೂ ಇಂಗ್ಲಿಷ್, ಹಿಂದಿ ಭಾಷಾ ಜ್ಞಾನ ಅವಶ್ಯ.

ಹುದ್ದೆ ವಿವರ

* ಟ್ರೇನಿ ಇಂಜಿನಿಯರ್ ಐ = 33

-ಎಲೆಕ್ಟ್ರಾನಿಕ್ಸ್ - 19

- ಮೆಕಾನಿಕಲ್- 11

- ಕಂಪ್ಯೂಟರ್ ಇಂಜಿನಿಯರ್ - 3

* ಪ್ರಾಜೆಕ್ಟ್ ಇಂಜಿನಿಯರ್ ಐ = 51

- ಎಲೆಕ್ಟ್ರಾನಿಕ್ಸ್ - 36

- ಮೆಕಾನಿಕಲ್- 8

- ಕಂಪ್ಯೂಟರ್ ಸೈನ್ಸ್ - 6

- ಎಲೆಕ್ಟ್ರಿಕಲ್ - 1

ಶೈಕ್ಷಣಿಕ ಅರ್ಹತೆ:

ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ ಆಂಡ್ ಟೆಲಿಕಮ್ಯುನಿಕೇಷನ್/ ಟೆಲಿಕಮ್ಯುನಿಕೇಷನ್, ಮೆಕಾನಿಕಲ್,ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್​ನಲ್ಲಿ ಬಿಇ, ಬಿ.ಟೆಕ್/ ಬಿಎಸ್ಸಿ ಇಂಜಿನಿಯರಿಂಗ್ ಪದವಿ ಪಡೆದಿರಬೇಕು. ಎಸ್ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದರೆ ಸಾಕು, ಉಳಿದ ಅಭ್ಯರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ 2 ವರ್ಷ, ಟ್ರೇನಿ ಇಂಜಿನಿಯರ್​ಗೆ 1 ವರ್ಷ ವೃತ್ತಿ ಅನುಭವ ಕೇಳಲಾಗಿದೆ.

ವಯೋಮಿತಿ: 31.12.2021ಕ್ಕೆ ಅನ್ವಯವಾಗುವಂತೆ ಟ್ರೇನಿ ಇಂಜಿನಿಯರ್​ಗೆ ಗರಿಷ್ಠ 25 ವರ್ಷ, ಪ್ರಾಜೆಕ್ಟ್ ಇಂಜಿನಿಯರ್​ಗೆ ಗರಿಷ್ಠ 28 ವರ್ಷ. ಸರ್ಕಾರದ ನಿಯಮದನ್ವಯ ಮೀಸಲಾತಿ ಅಭ್ಯರ್ಥಿಗಳಿಗೆ 3 ರಿಂದ 10 ವರ್ಷ ವಯೋ ಸಡಿಲಿಕೆ ಇದೆ.

ವೇತನ: ಟ್ರೇನಿ ಇಂಜಿನಿಯರ್​ಗೆ ಮೊದಲ ವರ್ಷ ಮಾಸಿಕ 25,000 ರೂ. 2ನೇ ವರ್ಷ ಮಾಸಿಕ 28,000, 3ನೇ ವರ್ಷ 31,000 ರೂ. ವೇತನ ನಿಗದಿಪಡಿಸಲಾಗಿದೆ. ಪ್ರಾಜೆಕ್ಟ್ ಇಂಜಿನಿಯರ್​ಗೆ ಮೊದಲ ವರ್ಷ ಮಾಸಿಕ 35,000 ರೂ., 2ನೇ ವರ್ಷ 40,000 ರೂ., 3ನೇ ವರ್ಷ 45,000 ರೂ., 4ನೇ ವರ್ಷಕ್ಕೆ ಮಾಸಿಕ 50,000 ರೂ. ವೇತನ ಹೊರತಾಗಿ ವಾರ್ಷಿಕ 10,000 ಭತ್ಯೆಯಾಗಿ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಶೈಕ್ಷಣಿಕ ಅಂಕ, ವೃತ್ತಿ ಅನುಭವ ಆಧರಿಸಿ ಸಿದ್ಧಪಡಿಸಲಾದ ಆಯ್ದಪಟ್ಟಿಯಲ್ಲಿನ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ಶಾರ್ಟ್​ಲಿಸ್ಟ್ ಮಾಡಲಾದ ಅಭ್ಯರ್ಥಿಗಳ ವಿವರಗಳನ್ನು ಬಿಇಎಲ್ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುವುದು.

ಅರ್ಜಿ ಶುಲ್ಕ: ಎಸ್​ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳು ಟ್ರೇನಿ ಹುದ್ದೆಗೆ 200 ರೂ., ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ 500 ರೂ. ಅರ್ಜಿ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೇ ದಿನ: 31.12.2021

ಅಧಿಸೂಚನೆಗೆ: https://bit.ly/3rX9uRi

ಮಾಹಿತಿಗೆ: http://www.bel-india.in

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net