ಅಪಘಾತವಾದ ವಾಹನ ನೋಡುತ್ತಿದ್ದ ಇಬ್ಬರು ಶಬರಿಮಲೆ ಯಾತ್ರಾರ್ಥಿಗಳಿಗೆ ಯಮನಂತೆ ಬಂದ ಬೇರೊಂದು ವಾಹನ...

pi kerala
Published on

ಕೇರಳ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಶಬರಿಮಲೆ ಯಾತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ಕರ್ನೂಲ್​​ನ ಆದಿ ನಾರಾಯಣನ್ ಮತ್ತು ಈಶ್ವರಪ್ಪ ಎಂದು ಗುರುತಿಸಲಾಗಿದೆ. ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್​​ಗೆ ಇಡುಕ್ಕಿಯ ಪೆರುವಂತನಂನಲ್ಲಿ ಮೊದಲು ಸಣ್ಣ ಅಪಘಾತ ಸಂಭವಿಸಿತ್ತು. ಇದರಿಂದ ಬಸ್​ಗೆ ಆದ ಹಾನಿಯನ್ನು ನೋಡುತ್ತಾ ಆದಿ ನಾರಾಯಣನ್ ಮತ್ತು ಈಶ್ವರಪ್ಪ ನಿಂತಿದ್ದರು.

ಈ ವೇಳೆ, ವೇಗವಾಗಿ ಬಂದ ಟೆಂಪೋ ಟ್ರಾವೆಲರ್ ವಾಹನವೊಂದು ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಇವರಿಬ್ಬರಿಗೆ ಗುದ್ದಿದೆ. ಪರಿಣಾಮವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net