ಸಚಿನ್ ಪಾಂಚಾಳ್ ಆತ್ಮಹತ್ಯೆ; ಸಚಿವ ಪ್ರಿಯಾಂಕ್ ಬೆನ್ನಿಗೆ ನಿಂತ ಗೃಹ ಸಚಿವ ಡಾ.ಪರಮೇಶ್ವರ|Sachin Panchal commits suicide

ggp1
Published on

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಹೊಸ ಹೊಸ ತಿರುವು ಪಡೆಯುತ್ತಿದೆ. ಪ್ರತಿಪಕ್ಷಗಳು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಪಟ್ಟುಹಿಡಿದಿವೆ. ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿವೆ. ಈ ನಡುವೆ ಗೃಹ ಸಚಿವ ಡಾ. ಜಿ.ಪರಮೇಶ್ವರ(

Dr.G. Prameswar) ಅವರು ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ್ದಾರೆ(Sachin Panchal commits suicide; Home Minister Dr. Parameshwar stood behind Minister Priyank). 

ಸಚಿನ್ ಪಾಂಚಾಳ್ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದ್ದು, ಪ್ರಿಯಾಂಕ್ ಖರ್ಗೆ(Priyankh Kharge) ರಾಜೀನಾಮೆ ಕೊಡುವ ಅಗತ್ಯತೆ ಇಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವ ಪಕ್ಷಕ್ಕೂ ಸರಿಯಲ್ಲ. ಡೆತ್‌ನೋಟ್‌ನಲ್ಲಿ ಸಚಿವರ ಹೆಸರು ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಸಚಿವರ ಹೆಸರನ್ನು ತಂದು, ಸರ್ಕಾರಕ್ಕೆ ಮಸಿ ಬಳಿಯುವ ಕೆಲಸವನ್ನು ಪ್ರತಿಪಕ್ಷಗಳು ಮಾಡುತ್ತಿವೆ. ಸತ್ಯಾಸತ್ಯತೆ ಹೊರಬರಲಿ ಎಂಬ ದೃಷ್ಟಿಯಿಂದ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಸಿಐಡಿಗೆ ವಹಿಸಲಾಗಿದೆ ಎಂದು ತಿಳಿಸಿದರು.

ತನಿಖೆಯ ವರದಿ ಬಂದ ನಂತರ ಏನು ಎಂಬುದನ್ನು ಹೇಳೋಣ. ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಡುವ ಅಗತ್ಯ ಇಲ್ಲ. ಅನವಶ್ಯಕವಾಗಿ ಅವರ ಹೆಸರನ್ನು ತೆಗೆದುಕೊಂಡು ರಾಜೀನಾಮೆ ಕೊಡುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದರು.

ಸಿಐಡಿಯಿಂದ ತನಿಖಾ ವರದಿ ಬಂದಿಲ್ಲವೆ?

ಸಿಬಿಐಗೆ ವಹಿಸುವಂತೆ ಬಿಜೆಪಿಯವರು ಒತ್ತಾಯಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲ ಪ್ರಕರಣಗಳನ್ನು ಸಿಬಿಐಗೆ ವಹಿಸಲು ಆಗುವುದಿಲ್ಲ. ಸಿಐಡಿ ಸಮರ್ಥವಾಗಿದೆ. ಅನೇಕ ಪ್ರಕರಣಗಳಲ್ಲಿ ಸಿಐಡಿ ತನಿಖೆಯ ವರದಿ ಬಂದಿದೆಯಲ್ಲವೇ? ಬಿಜೆಪಿಯವರು ಹೇಳಿದ್ದೆಲ್ಲ ಕೇಳುವುದಿಲ್ಲ. ಸಕರಾತ್ಮಕವಾಗಿ ಸಲಹೆ, ಸೂಚನೆ ನೀಡಿದರೆ ಕೇಳುತ್ತೇವೆ. ಅನವಶ್ಯಕವಾಗಿ ಎಲ್ಲದರಲ್ಲೂ ರಾಜಕೀಯ ಮಾಡಲು ಹೋದರೆ ಕೇಳುವುದಿಲ್ಲ ಎಂದು ತಿರುಗೇಟು ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮೇಲೆ ಶಾಸಕ ಸಿ.ಟಿ.ರವಿ ಅವಾಚ್ಯ ಪದ ಬಳಕೆ ಮಾಡಿರುವ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಲ್ಲವೆ? ಈ ನಿಟ್ಟಿನಲ್ಲಿ ಸಿಐಡಿ ಅವರು ತವ್ಮ ಕೆಲಸವನ್ನು ಪ್ರಾರಂಭಿಸಿದ್ದಾರೆ ಎಂದು ತಿಳಿಸಿದರು.

ಹೊಸ ವರ್ಷಕ್ಕೆ ಸೂಕ್ತ ಬಂದೋಬಸ್ತ್

ಸಾರ್ವಜನಿಕರು ಬಹಳ ಎಚ್ಚರಿಕೆಯಿಂದ ಹೊಸ ವರ್ಷದ ಸಂತೋಷವನ್ನು ಹಂಚಿಕೊಳ್ಳಬೇಕು. ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಅಗತ್ಯ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾರಿಗೂ ತೊಂದರೆಯಾಗದಂತೆ ಹೊಸ ವರ್ಷ ಆಚರಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net