ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷ ಸಾವು

28 smg sadanand kalal(2)
Published on

ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷ ಸದಾನಂದ ಎಂ.ಕಲಾಲ್ (61) ಅವರು ಶನಿವಾರ ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಶುಗರ್ ಲೆವೆಲ್ ಕುಸಿದ ಕಾರಣ ಸದಾನಂದ ಕಲಾಲ್ ಅವರನ್ನು ಕಳೆದ ಬುಧವಾರ ಶಿವಮೊಗ್ಗದಿಂದ ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಉಸಿರಾಟದ ತೊಂದರೆ ಎದುರಾದ ಕಾರಣ ಅವರನ್ನು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಎರಡು ದಿನ ಚಿಕಿತ್ಸೆ ನೀಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಶನಿವಾರ ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆ ಹಿರೇಕೆರೂರಿನ ಸದಾನಂದ ಕಲಾಲ್ ಅವರು ಧಾರವಾಡದಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ನಿವೃತ್ತಿ ಹೊಂದಿದ್ದರು. ಕಳೆದ ಫೆಬ್ರವರಿಯಲ್ಲಿ ಶಿವಮೊಗ್ಗ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಎರಡೂವರೆ ತಿಂಗಳ ಹಿಂದೆ ಶಿವಮೊಗ್ಗದ ಮಾರಿಕಾಂಬಾ ಜಾತ್ರಾ ಮಹೋತ್ಸವ ಹಿಂದಿನ ದಿನ ಬೈಕ್ ಡಿಕ್ಕಿಯಾಗಿ ಕೈ ಮತ್ತು ಕಾಲಿನ ಮೂಳೆ ಮುರಿದಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದು ಮೇ 29ರಂದು ಧಾರವಾಡದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net