

ನವದೆಹಲಿ: ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ರೆಟಿನಾ ಹಿಂಭಾಗದಲ್ಲಿ ಸೋಂಕು ಉಂಟಾಗಿದ್ದು, ಅದೇ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಹೇಳಲಾಗಿದೆ.
ಪ್ರಜ್ಞಾ ಸಿಂಗ್ ಅವರು ಕೆಲ ತಿಂಗಳುಗಳಿಂದ ಏಮ್ಸ್ ಆಸ್ಪತ್ರೆಯಲ್ಲಿ ರೆಟಿನಾ ಸಂಬಂಧಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡು ದಿನಗಳ ಹಿಂದೆ ಅದಕ್ಕೆಂದೇ ಏಮ್ಸ್ಗೆ ತೆರಳಿದ್ದರು. ಆದರೆ ಆ ಸಮಯದಲ್ಲಿ ತಪಾಸಣೆ ನಡೆಸಿರುವ ವೈದ್ಯರು, ಪ್ರಜ್ಞಾ ಅವರಿಗೆ ಆಸ್ಪತ್ರೆಗೆ ದಾಖಲಾಗಲು ಸೂಚಿಸಿದ್ದಾರೆ.
ಪ್ರಜ್ಞಾ ಅವರ ಕರೊನಾ ಪರೀಕ್ಷೆ ಮಾಡಲಾಗಿದೆ. ವರದಿ ನೆಗೆಟಿವ್ ಬಂದಿದೆ. ಆದರೆ ಅವರು ಸಂಪೂರ್ಣವಾಗಿ ಗುಣವಾಗುವವರೆಗೂ ಆಸ್ಪ್ರೆಯಲ್ಲೇ ಇರಬೇಕಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿರುವ ಕಾರಣದಿಂದಲೇ ಎನ್ಐಎ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಸಂಸದೆ ತಿಳಿಸಿದ್ದಾರೆ. (ಏಜೆನ್ಸೀಸ್)