10 ಸಾವಿರ ವನ ರಕ್ಷಕರಿಗೆ ಸುರಕ್ಷಾ ಕಿಟ್

MB PATIL
Published on

ಬೆಂಗಳೂರು: ಅರಣ್ಯ ರಕ್ಷಣೆ ಮಾಡುವ 10 ಸಾವಿರ ಅರಣ್ಯ ರಕ್ಷಕರು/ವೀಕ್ಷಕರು, ಕಾವಾಡಿಗಳು, ಮಾವುತರು ಮತ್ತು ಚಾಲಕರಿಗೆ ಸರ್ಕಾರಿಂದ ಸುರಕ್ಷಾ ಕಿಟ್ ವಿತರಣೆ ಮಾಡಲಾಗುತ್ತಿದೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (ಕೆಎಸ್‌ಡಿಎಲ್) ವತಿಯಿಂದ ಕಿಟ್ ನೀಡಲಾಗುತ್ತಿದ್ದು, ಇದರಲ್ಲಿ ಬ್ಯಾಗ್, ಜರ್ಕೀನ್, ಶೂ ಮತ್ತು ನೀರಿನ ಬಾಟಲು ಇರಲಿದೆ. ಸಿಎಸ್‌ಆರ್ ಂಡ್‌ನಿಂದ ಬುಧವಾರ(ಜೂನ್ 4) ಮಧ್ಯಾಹ್ನ 2 ಗಂಟೆಗೆ ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ವಿವರಿಸಿದರು.

ಕೆಎಸ್‌ಡಿಎಲ್‌ನಿಂದ 2024-25ನೇ ಸಾಲಿನ 2 ಕೋಟಿ ರೂ. ಸಿಎಸ್‌ಆರ್ ನಿಧಿಯನ್ನು ಈ ಕಿಟ್ ಖರೀದಿಗೆ ಬಳಸಲಾಗಿದೆ. ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆಗೆ ಬೇಕಾದ ಗಂಧದ ಎಣ್ಣೆ ಸಂಪತ್ತನ್ನು ಕಾಪಾಡುವಲ್ಲಿ ವನರಕ್ಷಕರ ಪಾತ್ರ ಮುಖ್ಯವಾಗಿದೆ.

ಬುಧವಾರ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಅರಣ್ಯ ವೃತ್ತಗಳ 2,168 ಸಿಬ್ಬಂದಿಗೆ ಈ ಕಿಟ್ ವಿತರಿಸಲಾಗುತ್ತದೆ. ಅರಣ್ಯ ಸಚಿವ ಈಶ್ವರ ಖಂಡ್ರೆ, ಕೆಎಸ್‌ಡಿಎಲ್ ಅಧ್ಯಕ್ಷ ಸಿ.ಎಸ್. ನಾಡಗೌಡ, ವನ್ಯಜೀವಿ ಮಂಡಳಿ ಸದಸ್ಯ ಧ್ರುವ ಪಾಟೀಲ ಸೇರಿ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಉಳಿದ ಭಾಗದ ಸಿಬ್ಬಂದಿಗೂ ಕಿಟ್ ವಿತರಣೆ ಮಾಡಲಾಗುವುದು ಎಂದು ಎಂ.ಟಿ. ಪಾಟೀಲ್ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net