ಆ.22ಕ್ಕೆ ಮಂತ್ರಾಲಯದಲ್ಲಿ ಸಾಹಿತ್ಯ ಸಮ್ಮೇಳನ

suri srinivas
Published on

ತರೀಕೆರೆ: ಆಂಧ್ರ ಪ್ರದೇಶದ ಮಂತ್ರಾಲಯದಲ್ಲಿ ಪ್ರಥಮ ಅಂತರ್ ರಾಜ್ಯಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಮಠದ ಶ್ರೀ ಸುಬುದೇಂದ್ರ ತೀರ್ಥ ಸ್ವಾಮೀಜಿಗಳಿಗೆ ಮನವಿ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದ್ದಾರೆ.

ತೆಲಂಗಾಣ ಘಟಕದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗುಡುಗಂಟಿ ವಿಠ್ಠಲ್ ಅವರೊಂದಿಗೆ ಮಂತ್ರಾಲಯಕ್ಕೆ ತೆರಳಿದಾಗ ಶ್ರೀಸುಬುದೇಂದ್ರ ತೀರ್ಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಈ ವಿಷಯ ಪ್ರಸ್ತಾಪಿಸಲಾಗಿದ್ದು, ತೆಲಂಗಾಣ, ಆಂಧ್ರ ಪ್ರದೇಶ, ಗೋವಾ, ಮಹಾರಾಷ್ಟ್ರ ಹಾಗೂ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ಆ.22ರಂದು ಮಂತ್ರಾಲಯಲ್ಲಿ ಪ್ರಥಮ ಅಂತರ್ ರಾಜ್ಯಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಶ್ರೀಗಳು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮಂತ್ರಾಲಯದ ಮಠದಲ್ಲಿ ಆ.22ರಂದು ತೆಲಂಗಾಣ, ಆಂಧ್ರ ಪ್ರದೇಶ, ಗೋವಾ, ಮಹಾರಾಷ್ಟ್ರ ಮತ್ತು ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕಗಳೆಲ್ಲ ಒಗ್ಗೂಡಿ ಒಂದು ದಿನದ ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿಶ್ಚಯಿಸಿದೆ. ಶ್ರೀಗಳು ಸಾನ್ನಿಧ್ಯವಹಿಸಿ ಸಮ್ಮೇಳನ ಉದ್ಘಾಟಿಸಲಿದ್ದು, ಆಂಧ್ರ ಪ್ರದೇಶದ ರಾಜ್ಯಪಾಲ ಅಬ್ದುಲ್ ನಜೀರ್ ಸಾಬ್, ಡಿಸಿಎಂ ಪವನ್ ಕಲ್ಯಾಣ್, ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net