

ಹಾವೇರಿ: ಇಲ್ಲಿನ ಅಶ್ವಿನಿ ನಗರದ 2ನೇ ಕ್ರಾಸ್‌ನಲ್ಲಿರುವ ನೂತನ ಶ್ರೀ ಶಿರಡಿ ಸಾಯಿಬಾಬಾರ ಅಮೃತ ಶಿಲಾಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಮತ್ತು ದೇಗುಲ ಲೋಕಾರ್ಪಣೆ ಕಾರ್ಯಕ್ರಮ ಆ. 28ರಂದು ಜರುಗಲಿದೆ.
ಬೆಳಗ್ಗೆ 10.30ಕ್ಕೆ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ನೆರವೇರಲಿದೆ. ಮಧ್ಯಾಹ್ನ 11 ಗಂಟೆಗೆ ನಗರದ ಪ್ರಮುಖ ಬೀದಿಗಳಲ್ಲಿ ಉತ್ಸವ ಮೂರ್ತಿ ಮೆರವಣಿಗೆ ನಡೆಯಲಿದೆ. ನಂತರ ವೇದಿಕೆ ಕಾರ್ಯಕ್ರಮ ಜರುಗಲಿದೆ.
ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಹಾಗೂ ಕೂಡಲದ ಶ್ರೀ ಗುರುಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಟ್ರಸ್ಟ್‌ನ ಅಧ್ಯಕ್ಷ ಜಗದೀಶ ಬೆಟಗೇರಿ ಅಧ್ಯಕ್ಷತೆ ವಹಿಸುವರು.
ಮುದ್ರಾರತ್ನ ಡಾ. ಲಕ್ಷ್ಮೀ ಶ್ರೀನಿವಾಸ ಗುರೂಜಿ, ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಶಿವಕುಮಾರ ಉದಾಸಿ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ, ಮಾಜಿ ಶಾಸಕ ಶಿವರಾಜ ಸಜ್ಜನರ, ಸಂಜೀವಕುಮಾರ ನೀರಲಗಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ, ಪ್ರಭಾಕರರಾವ ಮಂಗಳೂರು, ನಾಗೇಂದ್ರ ಮಾಳಿ, ಕವಿತಾ ಯಲವಗಿಮಠ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್‌ನ ಪ್ರಕಟಣೆ ತಿಳಿಸಿದೆ.