

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಸೆಪ್ಟೆಂಬರ್ 28ರಂದು ರಿಲೀಸ್ ಆಗಲಿದೆ ಎಂದು ಅಭಿಮಾನಿಗಳು ಕಾದು ಕುಳಿತಿದ್ದರು. ಆದರೆ ಈ ಚಿತ್ರದ ಬಿಡುಗಡೆ ದಿನಾಂಕ (Salaar Release Date) ಮುಂದೆ ಹೋಗಿದೆ ಎಂಬ ಬಗ್ಗೆ ಇತ್ತೀಚಿನ ದಿನಗಳಲ್ಲಿ ಸುದ್ದಿ ಹರಿದಾಡಲು ಆರಂಭಿಸಿತ್ತು.
ಹಾಗಿದ್ದರೂ ಕೂಡ ಈ ಚಿತ್ರತಂಡದವರು ಮೌನವಾಗಿದ್ದರು. ಅಂತೂ ಇಂತೂ ಈಗ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ ಕಡೆಯಿಂದ ಆ ಬಗ್ಗೆ ಪ್ರತಿಕ್ರಿಯೆ ಸಿಕ್ಕಿದೆ.
ಪ್ರಭಾಸ್ ಅವರಿಗೆ ಜೋಡಿಯಾಗಿ ಶ್ರುತಿ ಹಾಸನ್ ಸಿನಿಮಾದಲ್ಲಿ ನಟಿಸುತ್ತಿದ್ದು, ಪ್ರಶಾಂತ್ ನೀಲ್ ಚಿತ್ರದ ನಿರ್ದೇಶನ ಮಾಡಲಿದ್ದಾರೆ.
ಬಿಡುಗಡೆ ಆಗಿರುವ ಟೀಸರ್ಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಆದಷ್ಟು ಬೇಗ ‘ಸಲಾರ್’ ನೋಡಬೇಕು ಎಂಬುದು ಫ್ಯಾನ್ಸ್ ಆಸೆ ಆಗಿತ್ತು. ಆದರೆ ರಿಲೀಸ್ ದಿನಾಂಕ ಮುಂದೂಡಿಕೆ ಆಗಿದ್ದು, ಇನ್ನೂ ಒಂದಷ್ಟು ತಿಂಗಳು ಕಾಯುವುದು ಅನಿವಾರ್ಯ ಆಗಿದೆ.
ನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಜಾಸ್ತಿ ಇದೆ. ಹಾಗಾಗಿ ಆ ನಿರೀಕ್ಷೆಯ ಮಟ್ಟವನ್ನು ತಲುಪಲು ಚಿತ್ರತಂಡ ಪ್ರಯತ್ನಿಸುತ್ತಿದೆ. ಆ ಕಾರಣದಿಂದ ಅಂದುಕೊಂಡ ದಿನಾಂಕದಲ್ಲಿ ‘ಸಲಾರ್’ ಚಿತ್ರವನ್ನು ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಸಿನಿಮಾವನ್ನು ಕಟ್ಟಿಕೊಡಬೇಕು ಎಂಬ ಉದ್ದೇಶದಿಂದ ರಿಲೀಸ್ ದಿನಾಂಕ ಮುಂದೂಡಲಾಗಿದೆ.
'ಸಲಾರ್’ ಸಿನಿಮಾ ಯಾವಾಗ ಬಿಡುಗಡೆ ಆಗಲಿದೆ? ಈ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾಹಿತಿ ನೀಡುವುದಾಗಿ ‘ಹೊಂಬಾಳೆ ಫಿಲ್ಮ್ಸ್’ ಹೇಳಿದೆ.