ಗ್ರಾಪಂ ಗ್ರಂಥಪಾಲಕರ ವೇತನ ಏರಿಕೆ: ಸಚಿವ ಖರ್ಗೆಗೆ ಅಭಿನಂದನೆ

Priyank Kharge
Published on

ಬೆಂಗಳೂರು: ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಗ್ರಂಥಪಾಲಕ ಹಾಗೂ ಮೇಲ್ವಿಚಾರಕರಿಗೆ ಕನಿಷ್ಠ ವೇತನ ನಿಗದಿಪಡಿಸುವ ಜತೆಗೆ ಇತರೆ ಭತ್ಯೆಗಳನ್ನು ನೀಡುವ ಮೂಲಕ ನೌಕರರ ಕುಟುಂಬಗಳಿಗೆ ಜೀವನಾಧಾರ ಕಲ್ಪಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮೇಲ್ವಿಚಾರಕರ ನೌಕರರ ಸಂಘ ಅಭಿನಂದಿಸಿದೆ.

ಕಳೆದ 35 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ತಮ್ಮ ಬೇಡಿಕೆಯನ್ನು ಈಡೇರಿಸಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಕ್ಕಾಗಿ ರಾಜ್ಯದ ಎಲ್ಲ ಗ್ರಂಥಪಾಲಕರ ಹಾಗೂ ಅವರ ಕುಟುಂಬದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆಂದು ಸಂಘದ ರಾಜ್ಯಾಧ್ಯಕ್ಷ ಸದಾನಂದ ಪೂಜಾರಿ ಸಚಿವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ರಾಜ್ಯದ 5,622 ಗ್ರಾಪಂ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳನ್ನಾಗಿ ಮೇಲ್ದರ್ಜೆಗೆರಿಸುವ ಸಚಿವರ ನಿರ್ಧಾರವನ್ನು ಸಂಘ ಸ್ವಾಗತಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net