ಈ ಯೋಜನೆ ಜಾರಿಗೆ ಮುನ್ನವೇ ಅರ್ಜಿಗಳ ಮಾರಾಟ

17 nrp 2
ಗೃಹಲಕ್ಷ್ಮೀ ಯೋಜನೆ ನಕಲಿ ಅರ್ಜಿಗಳನ್ನು ವಿತರಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಯುವ ಕಾಂಗ್ರೆಸ್ ಮುಖಂಡರು ಉಪ ತಹಸೀಲ್ದಾರ್ ಚಂದ್ರಶೇಖರ್‌ಗೆ ಮನವಿ ಸಲ್ಲಿಸಿದರು.
Published on

ಎನ್.ಆರ್.ಪುರ: ಗೃಹಲಕ್ಷ್ಮೀ ಯೋಜನೆ ಹೆಸರಿನಲ್ಲಿ ನಕಲಿ ಅರ್ಜಿಗಳ ಮಾರಾಟ ಆಗುತ್ತಿರುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶೃಂಗೇರಿ ಕ್ಷೇತ್ರದ ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪ ತಹಸೀಲ್ದಾರ್ ಚಂದ್ರಶೇಖರ್ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರದ ಗ್ಯಾರಂಟಿ ಘೋಷಣೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಸದ್ಯದಲ್ಲಿ ಜಾರಿಗೆ ಬರುತ್ತಿದೆ. ಅದಕ್ಕಾಗಿ ರಾಜ್ಯದ ಜನರು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಕ್ಷೇತ್ರದಲ್ಲಿ ಹಲವು ಸೈಬರ್ ಸೆಂಟರ್‌ಗಳಲ್ಲಿ ಯೋಜನೆ ಜಾರಿಗೆ ಮುನ್ನವೇ ನಕಲಿ ಅರ್ಜಿಗಳನ್ನು ಮಾರಾಟ ಮಾಡುತ್ತಿದ್ದಾರೆ. ಇದರಿಂದ ಕೆಲವು ಮುಗ್ಧ ಹಾಗೂ ಹಳ್ಳಿಯ ಜನರು ಮೋಸ ಹೋಗುತ್ತಿದ್ದಾರೆ. ಆದ್ದರಿಂದ ಈ ಬಗ್ಗೆ ಪರಿಶೀಲಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಯುವ ಕಾಂಗ್ರೆಸ್ ಮುಖಂಡರಾದ ರತನ್ ಅರಗಿ, ಎಂ.ಸಿ.ಅಭಿಲಾಷ್, ಸುಜಿತ್, ಸಾಧನ್, ಶ್ರೀಧರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net