Karnataka Assembly Elections 2023; ನಾಳೆ ಮದ್ಯ ಮಾರಾಟ ನಿಷೇಧ

alcohol
Published on

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯ ಚುನಾವಣಾ ಆಯೋಗ ಮತ ಎಣಿಕೆಗೆ ಅಗತ್ಯ ಇರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಎಲ್ಲಾ ಪಕ್ಷದ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕುತ್ತಿದ್ದಾರೆ. ಹೀಗಿರುವಾಗ ಬೆಂಗಳೂರಿನಲ್ಲಿ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ.

ನಾಳೆ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತ ಎಣಿಕೆ ಹಿನ್ನಲೆ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ರವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದ್ದು, ಹೀಗಾಗಿ ನಾಳೆ ಬೆಳಗ್ಗೆಯಿಂದಲೇ ಬಾರ್ ರೆಸ್ಟೋರೆಂಟ್ ಗಳು ಬಂದ್​​ ಇರಲಿವೆ.

ಬಾರ್ ಅಂಡ್ ರೆಸ್ಟೋರೆಂಟ್​​ಗಳಲ್ಲಿ ಊಟ ಮಾಡಲು ಅವಕಾಶ ಇರುತ್ತದೆ. ಆದರೆ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಮತ ಎಣಿಕೆ ಸಮಯದಲ್ಲಿ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು ಗೆದ್ದ ಹಾಗು ಸೋತ ಅಭ್ಯರ್ಥಿಗಳ ಪರವಾಗಿ ಪ್ರತಿಭಟನೆ ಮಾಡುವ ಸಾಧ್ಯತೆ ಹಿನ್ನಲೆ ಮತ ಎಣಿಕೆ ಕೇಂದ್ರಗಳನ್ನೊಳಗೊಂಡು ಬೆಂಗಳೂರಿನಾದ್ಯಂತ ನಾಳೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net