

ಬೆಂಗಳೂರು: ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆಂಗೇರಿ ನಿವಾಸಿ ಜಾಫರ್ ಷರೀಫ್(೪೫) ಬಂಧಿತ. ಆರೋಪಿಯಿಂದ ಒಂದೂವರೆ ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿಯ ಗಂಗಾಧರ ಲೇಔಟ್ ರಸ್ತೆಯ ಶಾಲೆಯೊಂದರ ಬಳಿ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಸಿದ್ದತೆ ನಡೆಸಿದ್ದ.ಈ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ನೆರೆ ರಾಜ್ಯಗಳಿಂದ ಗಾಂಜಾ ತಂದು ವಿದ್ಯಾರ್ಥಿಗಳು, ಸ್‌ಟಾವೇರೆ ಇಂಜಿನಿಯರ್ ಹಾಗೂ ಇತರೆ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.