ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

IMG-20240830-WA0002
Published on

ಸಾಲಿಗ್ರಾಮ: ಸಮಾಜದಲ್ಲಿರುವ ನಿರುದ್ಯೋಗಿಗಳಿಗೆ ಸ್ವ ಉದ್ಯೋಗ ಕಲ್ಪಿಸಿಕೊಡುವುದು ಮತ್ತು ಸರ್ಕಾರದ ಸೌಲಭ್ಯಗಳನ್ನು ಬಡ ಕುಟುಂಬಗಳಿಗೆ ಕೊಡಿಸುವುದು, ಶಿಕ್ಷಣದಿಂದ ವಂಚಿತರಾದ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಕೆಲಸವನ್ನು ಮಾಡಿದರೆ ನಾಯಕ ಸಮಾಜ ಅಭಿವೃದ್ಧಿಯತ್ತ ಸಾಗುತ್ತದೆ. ಆ ಕೆಲಸವನ್ನು ಸಾಲಿಗ್ರಾಮ ವಾಲ್ಮೀಕಿ ನಾಯಕರ ಸಂಘ ಮಾಡುತ್ತಿದೆ ಎಂದು ಬೆಂಗಳೂರಿನ ವಾಣಿಜ್ಯ ತೆರಿಗೆ ಉಪ ಆಯುಕ್ತ ಶ್ರೀಧರನಾಯಕ ತಿಳಿಸಿದರು.
ಸಾಲಿಗ್ರಾಮ ಪಟ್ಟಣದ ನಾಯಕರ ಬೀದಿಯ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಮೈದಾನದಲ್ಲಿ ತಾಲೂಕು ಮಹರ್ಷಿ ವಾಲ್ಮೀಕಿ ನಾಯಕರ ಸಂಘದಿಂದ ನಡೆದ ಸಾಲಿಗ್ರಾಮ ಹೋಬಳಿ ಮಟ್ಟದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಿಂದಿನ ಆಡಳಿತ ಪದಾಧಿಕಾರಿಗಳಿಗೆ ಬೀಳ್ಕೊಡುಗೆ ಹಾಗೂ ಸಂಘದ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net