ಸಾಲು ಮರದ ತಿಮ್ಮಕ್ಕ ಆರೋಗ್ಯದಲ್ಲಿ ಸುಧಾರಣೆ

Saalumarda timmakka 1
Published on

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯ ಸುಧಾರಿಸುತ್ತಿದ್ದು, ಐಸಿಯುನಿಂದ ವಿಶೇಷ ವಾರ್ಡ್‌ಗೆ ಶ್‌ಟಿ ಮಾಡಲು ಜಯನಗರ ಅಪಲೋ ಆಸ್ಪತ್ರೆಯ ವೈದ್ಯರು ನಿರ್ಧರಿಸಿದ್ದಾರೆ.

ಭಾನುವಾರ ಸ್ನಾನದ ಮನೆಯಲ್ಲಿ ಜಾರಿ ಬಿದ್ದು, ಪೆಟ್ಟು ಮಾಡಿಕೊಂಡಿದ್ದ ತಿಮ್ಮಕ್ಕ ಅವರನ್ನು ತಕ್ಷಣವೇ ಅಪಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬೆನ್ನು ಮೂಳೆಗೆ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಆಪರೇಷನ್ ಬೇಕಾಗಬಹುದು ಎಂದು ಹೇಳಲಾಗುತ್ತಿತ್ತು. ಎಲ್ಲಾ ಪರೀಕ್ಷೆಗಳನ್ನು ನಡೆಸಿರುವ ವೈದ್ಯರು ಆಪರೇಷನ್ ಬದಲಿಗೆ ಸುಧೀರ್ಘ ವಿಶ್ರಾಂತಿಗೆ ಸಲಹೆ ಮಾಡಿದ್ದಾರೆ ಎಂದು ತಿಮ್ಮಕ್ಕ ಅವರ ದತ್ತು ಪುತ್ರ ಬಳ್ಳೂರು ಉಮೇಶ್ ವಿಜಯವಾಣಿಗೆ ತಿಳಿಸಿದ್ದಾರೆ.

ಅಪಲೋ ಆಸ್ಪತ್ರೆಗೆ ಸರ್ಕಾರದ ಪರವಾಗಿ ಭೇಟಿ ನೀಡಿದ್ದ ಗೃಹ ಸಚಿವ ಜಿ.ಪರಮೇಶ್ವರ್ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಶುಭ ಹಾರೈಸಿದ್ದರು.

ತಿಮ್ಮಕ್ಕ ಅವರ ಆಸ್ಪತ್ರೆಯ ಸಂಪೂರ್ಣ ಬಿಲ್‌ನ್ನು ಸರ್ಕಾರವೇ ಭರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net