ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಶುಭ ಹಾರೈಸಿದ ಸಾಲು ಮರದ ತಿಮ್ಮಕ್ಕ

siddaramayya and timmakka
Published on

ಬೆಂಗಳೂರು: ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಶುಭ ಹಾರೈಸಿದರು.‌ ನಾಡಿನಲ್ಲಿ ಮಳೆ, ಬೆಳೆ ಆಗಿ ಸಮೃದ್ಧವಾಗಿ ಆಡಳಿತ ನಡೆಸುವಂತೆ ಆಗಲಿ ಎಂದು ತಿಮ್ಮಕ್ಕ ಶುಭ ಹಾರಿಸಿದರು.

ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆ ಎಂದು ಸಿದ್ದರಾಮಯ್ಯನವರು ತಿಮ್ಮಕ್ಕ ಅವರಿಗೆ ಕಿವಿ ಮಾತು ಹೇಳಿದರು. ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಾಕು ಮಗ ಬಳ್ಳೂರು ಉಮೇಶ್ ಇದ್ದರು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net