ಸಮಂತಾ-ನಾಗಚೈತನ್ಯ ದಾಂಪತ್ಯ ಅಂತ್ಯ; ಅಧಿಕೃತ ಘೋಷಣೆ ಮಾಡಿದ ತಾರಾದಂಪತಿ

samanta
Published on

ಹೈದರಾಬಾದ್: ನಟಿ ಸಮಂತಾ ಮತ್ತು ನಟ ನಾಗಚೈತನ್ಯ ಅವರ ವೈಯಕ್ತಿಕ ಜೀವನ ಇತ್ತೀಚೆಗೆ ಭಾರೀ ಚರ್ಚೆಯಲ್ಲಿದೆ. ಎಷ್ಟೋ ದಿನಗಳಿಂದ ಈ ತಾರಾದಂಪತಿ ಡಿವೋರ್ಸ್ ಪಡೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಇದೀಗ ಸ್ವತಃ ಇವರಿಬ್ಬರೇ ತಮ್ಮ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ಸಮಂತಾ ಮತ್ತು ನಾಗಚೈತನ್ಯ ಇಬ್ಬರೂ ತಂತಮ್ಮ ಇನ್​ಸ್ಟಾಗ್ರಾಂ ಖಾತೆಗಳಲ್ಲಿ ಒಂದೇ ರೀತಿಯ ಸಂದೇಶಗಳನ್ನು ಪೋಸ್ಟ್​ ಮಾಡಿದ್ದಾರೆ. "ನಾವಿಬ್ಬರೂ ಗಂಡ-ಹೆಂಡತಿಯ ಸಂಬಂಧ ಬಿಟ್ಟು ಪರಸ್ಪರ ದೂರವಾಗುವ ನಿರ್ಧಾರ ತೆಗೆದುಕೊಂಡಿದ್ದೇವೆ. ಒಂದು ದಶಕದ ಮಟ್ಟಿಗಿನ ಆಪ್ತಸ್ನೇಹವನ್ನು ನಾವು ಹೊಂದಿದ್ದೆವು. ಬಹುಶಃ ಅದೇ ನಮ್ಮಿಬ್ಬರ ಸಂಬಂಧದ ಸತ್ವವಾಗಿತ್ತು. ಇದರಿಂದಲೇ ಮುಂದೆಯೂ ನಮ್ಮಿಬ್ಬರ ನಡುವೆ ವಿಶೇಷ ನಂಟು ಮುಂದುವರಿಯುತ್ತದೆ ಎಂದು ನಂಬಿದ್ದೇವೆ" ಎಂದು ಸಮಂತಾ ಮತ್ತು ನಾಗಚೈತನ್ಯ ಬರೆದಿದ್ದಾರೆ.

ಜೊತೆಗೆ, ತಮ್ಮ ಈ ಕಷ್ಟಕಾಲದಲ್ಲಿ ತಮ್ಮ ಅಭಿಮಾನಿಗಳು, ಹಿತೈಷಿಗಳು ಮತ್ತು ಮಾಧ್ಯಮದವರು ತಮಗೆ ಬೆಂಬಲ ನೀಡಬೇಕು. ತಾವು ಮೂವ್​ ಆನ್​ ಆಗಲು ಅಗತ್ಯವಾದ ಪ್ರೈವೆಸಿ ಕೊಡಬೇಕು ಎಂದೂ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net