ಬಾಲಿವುಡ್​ ಸ್ಟಾರ್​ ನಟನ ಚಿತ್ರಕ್ಕೆ ಸಮಂತಾ ನಾಯಕಿ?

Untitled design - 2023-09-18T170708.308
Published on

ಮುಂಬೈ: ಇತ್ತೀಚೆಗಷ್ಟೇ ಟಾಲಿವುಡ್​ನ ಸ್ಟಾರ್​ ನಟ ವಿಜಯ್​ ದೇವರಕೊಂಡ ಜತೆ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ 'ಖುಷಿ' ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಂಡಿದ್ದು, ಸಮಂತಾ ನಟನೆಯ ಈ ಸಿನಿಮಾಗೆ ಫ್ಯಾನ್ಸ್ ಅಭಿನಂದನೆ ತಿಳಿಸಿದ್ದರು. ಇದೀಗ ಮತ್ತೊಬ್ಬ ಸ್ಟಾರ್​ ನಟನ ಸಿನಿಮಾದಲ್ಲಿ ನಟಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

'ಖುಷಿ' ಚಿತ್ರದ ಯಶಸ್ಸಿನ ಬೆನ್ನಲ್ಲೇ ಮುಂಬೈ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ ಸ್ನೇಹಿತರೊಡನೆ ಭೇಟಿ ನೀಡಿರುವ ಸಮಂತಾ, ತಮ್ಮ ರಜೆ ದಿನಗಳನ್ನು ಕಳೆಯುತ್ತಿದ್ದಾರೆ. ಈ ಮಧ್ಯೆ ಬಾಲಿವುಡ್​ನ ಸಲ್ಮಾನ್​ ಖಾನ್​ ಜತೆ ಸಮಂತಾ ಹೊಸ ಸಿನಿಮಾದಲ್ಲಿ ಅಭಿನಯಿಸಲಿದ್ದು, ಚಿತ್ರವನ್ನು ಕರಣ್​ ಜೋಹರ್​ ನಿರ್ದೇಶಿಸಲಿದ್ದಾರೆ ಎಂದು ಹೇಳಲಾಗಿದೆ.

ವರದಿಗಳ ಪ್ರಕಾರ, ನಿರ್ದೇಶ ಕರಣ್ ಜೋಹರ್ ಮತ್ತು ಸಲ್ಮಾನ್ ಖಾನ್ ಕಾಂಬಿನೇಷನ್​​ನಲ್ಲಿ ಮೂಡಿಬರಲಿರುವ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಲು ನಟಿಗೆ ಆಫರ್​ ಲಭಿಸಿದೆ ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅಚ್ಚರಿ ಸಂಗತಿ ಎಂದರೆ ಈ ಚಿತ್ರದಲ್ಲಿ ಅಭಿನಯಿಸಲು ಸಮಂತಾ ಇನ್ನೂ ಸಹಿ ಹಾಕಿಲ್ಲ. ನಿರ್ಧರಿಸಲು ಒಂದಷ್ಟು ಸಮಯವನ್ನು ತೆಗೆದುಕೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಮುಂದಿನ ದಿನಗಳಲ್ಲಿ ಸಮಂತಾ ಯಾವ ರೀತಿಯ ಪ್ರಾಜೆಕ್ಟ್​ಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕು. ಸದ್ಯ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡಿರುವ ಖುಷಿ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net